ಧಾರವಾಡ | ಮೂಲಭೂತ ಸೌಕರ್ಯಗಳಿಂದ ವಂಚಿತವಾದ ತಿರ್ಲಾಪೂರ ಗ್ರಾಮ; ಕ್ರಮಕ್ಕೆ ಒತ್ತಾಯ

Date:

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಿರ್ಲಾಪೂರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳುತ್ತಿದ್ದು, ಆ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ನೀಡುವುದರ ಮೂಲಕ ಸಮಸ್ಯೆ ಬಗೆಹರಿಯದಿದ್ದರೆ; ಧರಣಿ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದರು.

- Advertisement -

ಈ ವೇಳೆ ಕರ್ನಾಟಕ ರೈತ ಸೇನೆಯ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಸ್ವಾಮೀಜಿ ಮಾತನಾಡಿ, ನವಲಗುಂದದ ತಿರ್ಲಾಪೂರ ಗ್ರಾಮವು ಹಲವು ಮಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬಗೆಹರಿಸಲು ಒತ್ತಾಯಿಸಿ ಹಲವು ಬಾರಿ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಬೇಡಿಕೆಗಳನ್ನು ಈಡೇರಿಸುವದರಲ್ಲಿ ವಿಫಲರಾಗಿದ್ದಾರೆ. ಕಾರಣ ಸಂಬಂಧಪಟ್ಟ ಅಧಿಕಾರಿಗಳು ಅಭಿವೃದ್ಧಿ ಬಗ್ಗೆ ಒತ್ತುಕೊಡದೇ ಭ್ರಷ್ಟಾಚಾರಕ್ಕೆ ಮನ್ನಣೆ ನೀಡಿದ್ದು ಕಂಡು ಬಂದಿದೆ. ಗ್ರಾಮದ ಅಭಿವೃದ್ಧಿ ಕಡೆಗೆ ಒತ್ತು ಕೊಡುವ ಅಧಿಕಾರಿಗಳನ್ನು ನೇಮಕ ಮಾಡಿ ಗ್ರಾಮದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳ ತಂಡ ರಚನೆ ಮಾಡಲು ಆದೇಶ ಮಾಡಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕುಡಿಯುವ ನೀರಿನ ಕೆರೆಯಲ್ಲಿ ಕಸ-ಕಡ್ಡಿ ಬೆಳೆದು ನೀರು ಮಲೀನವಾಗಿದ್ದು ಇದರಿಂದ ಗ್ರಾಮದಲ್ಲಿ ಹಲವಾರು ಜನರಿಗೆ ವಿವಿಧ ಕಾಯಿಲೆಗಳು ಕಂಡು ಬಂದಿವೆ ಸಾವಿರಾರು ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕರ್ನಾಟಕ ನೀರಾವರಿ ಇಲಾಖೆಗೆ ಸಂಬಂಧಿಸಿರುವ ಮೂರಂ ಕ್ವಾರಿಗಳು ಅಂದಾಜು 30 ರಿಂದ 35 ಎಕರೆ ಜಮೀನಿದ್ದು ಈ ಕ್ವಾರಿಯನ್ನು ಅಲ್ಪ ಪ್ರಮಾಣದಲ್ಲಿ ಹೂಳೆತ್ತಿ ಕುಡಿಯುವ ನೀರಿಗಾಗಿ ಅಭಿವೃದ್ಧಿ ಪಡಿಸಬೇಕು. 15 ಸಾವಿರ ಜನಸಂಖ್ಯೆ ಹೊಂದಿರುವ ತಿರ್ಲಾಪೂರ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ಅವಶ್ಯಕತೆ ಬಹಳ ಇದ್ದು, ಸಾರ್ವಜನಿಕರ ಆರೋಗ್ಯ ತಪಾಸಣೆಗಾಗಿ ನವಲಗುಂದ, ಹುಬ್ಬಳ್ಳಿಗೆ ಕಡೆಗೆ ಹೋಗುವ ಪರಿಸ್ಥಿತಿ ಬಂದಿದೆ. ನಮ್ಮ ಹೊಲ ನಮ್ಮ ದಾರಿ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. 2019 -2024 ರವರೆಗೆ ಎನ್ಆರ್‌ಜಿ ಯೋಜನೆಯಡಿಯಲ್ಲಿ ಬಹುದೊಡ್ಡ ಕಳಪೆ ಮಟ್ಟದ ಕಾಮಗಾರಿಗಳನ್ನು ಮಾಡಿ ಬಿಲ್ ತೆಗೆದುಕೊಂಡು ಭ್ರಷ್ಟಾಚಾರವ ಎಸಗಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ದ್ವಾಮವ್ವ, ದುರ್ಗವ್ವ ಮೂರ್ತಿ ಹೊತ್ತು ಭಾವೈಕ್ಯ ಮೆರೆದ ಮುಸ್ಲಿಮರು

ನಮ್ಮ ಬೇಡಿಕೆಗಳನ್ನು 15 ದಿನಗಳ ಒಳಗಾಗಿ ಬಗೆಹರಿಸಬೇಕು. ಒಂದುವೇಳೆ ಕ್ರಮಕೈಗೊಳ್ಳದಿದ್ದರೆ; ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಮಾಡುತ್ತೇವೆ. ಧರಣಿ ಮಾಡುವ ಸಾರ್ವಜನಿಕರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ಜಿಲ್ಲಾಧಿಕಾರಿ ಹಾಗೂ ಸರ್ಕಾರ ನೇರ ಹೊಣೆ ಹೊರಬೇಕಾಗುತ್ತ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ತಿರ್ಲಾಪೂರ ಗ್ರಾಮದ ನಾಗರಿಕರು, ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...