ಧಾರವಾಡ | ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು: ದೀಪಾ ಭಾಸ್ತಿ

Date:

ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು. ಅನೇಕ ಯುವಕರು ಇಂದು ಅನುವಾದ ಕೃಷಿ ಮಾಡುತ್ತಿದ್ದು ಅನುವಾದದ ಭವಿಷ್ಯ ಉಜ್ವಲವಾಗುವಂತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಬುಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಮಾತನಾಡಿದರು.

- Advertisement -

ನಾನು ಪೂರ್ಣಾವಧಿ ಲೇಖಕಿ. ಆದರೆ ಅರೆಕಾಲಿಕ ಅನುವಾದಕಿ. ನಮ್ಮ ರಾಜ್ಯದಲ್ಲಿ ಅನೇಕ ಕನ್ನಡಗಳಿದ್ದು ಎಲ್ಲಾ ಕನ್ನಡಗಳನ್ನು ಗೌರವಿಸುವಂತಾಗಬೇಕೆ ವಿನಹ ನಿರ್ಲಕ್ಷಿಸಬಾರದು. ದಕ್ಷಿಣ ಕರ್ನಾಟಕ ಅನೇಕ ಸಾಹಿತ್ಯ ಕೃತಿಗಳು ಅನುವಾದವಾದಂತೆ ಉತ್ತರ ಕರ್ನಾಟಕದ ಕೃತಿಗಳು ಅನುವಾದಗೊಳ್ಳಬೇಕಾಗಿದೆ. ಉತ್ತರ ಕರ್ನಾಟಕದ ಅನೇಕ ಸಾಹಿತ್ಯ ಕೃತಿಗಳನ್ನು ನಾನು ಓದಿದ್ದೇನೆ. ಅವು ಉತ್ಕೃಷ್ಟವಾದವುಗಳಾಗಿವೆ. ಆದರೆ ನನಗೆ ಉತ್ತರ ಕರ್ನಾಟಕ ಭಾಷೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವುಗಳನ್ನು ಅನುವಾದ ಮಾಡಲು ಸಾಧ್ಯವಾಗಿಲ್ಲ. ಸರಿಯಾಗಿ ಅರ್ಥಮಾಡಿಕೊಳ್ಳುವವರು ಅನುವಾದಕ್ಕೆ ಮುಂದು ಬಂದರೆ ಉತ್ತರ ಕರ್ನಾಟಕದ ಗಟ್ಟಿ ಭಾಷೆ ಅನ್ಯರಿಗೂ ತಿಳಿಯುವಂತಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕನ್ನಡ ಭಾಷೆ ಸತ್ವಯುತವಾದ ಭಾಷೆ ಅದಕ್ಕೆ ತನ್ನದೇ ಆದ ಪರಂಪರೆ ಇದೆ. ಭಾಷೆ ಉಳಿಯಬೇಕಾದರೆ ಅದರ ಬಳಕೆಯಾಗಿ ಬೆಳೆಯಲು ಸಾಧ್ಯ. ಆಧುನಿಕತೆಗೆ ತಕ್ಕಂತೆ ಹೊಸ ತಂತ್ರಜ್ಞಾನ ಬಳಸಿಕೊಂಡಲ್ಲಿ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯಲು ಸಾಧ್ಯ. ತಂತ್ರಜ್ಞಾನದ ಬಳಕೆಯಾಗದಿದ್ದರೆ ಭಾಷೆ ಸಮೃದ್ಧವಾಗಲಾರದು. ಕ.ವಿ.ವ. ಸಂಘವು ನನ್ನನ್ನು ಸನ್ಮಾನಿಸಿ, ಗೌರವಿಸುತ್ತಿರುವುದು ಅಭಿಮಾನದ ಸಂಗತಿ ಎಂದು ತಮ್ಮ ಹರ್ಷ ವ್ಯಕ್ತಪಡಿಸಿದರು.

‘ದಿ. ಹಿಂದೂ’ ಪತ್ರಿಕೆಯ ಬೆಳಗಾವಿ ವರದಿಗಾರ ಹೃಷಿಕೇಶ ಬಹದ್ದೂರ್ ದೇಸಾಯಿ ದೀಪಾ ಭಾಸ್ತಿ ಅವರ ಬದುಕು-ಬರಹ ಕುರಿತು ಮಾತನಾಡಿ, ದೀಪಾ ಭಾಸ್ತಿ ಅವರು ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಅನುವಾದಕರು. ಪಾಶ್ಚಾತ್ಯವಲ್ಲದ ಮೊದಲ ಅನುವಾದಕಿ. ನಾನು ಮತ್ತು ದೀಪಾ ಭಾಸ್ತಿ ಪತ್ರಿಕಾ ವರದಿಗಾರರಾಗಿ ಕೆಲಸ ಮಾಡಿದ ಅನುಭವವಿದ್ದವರು. ಭಾನು ಮುಷ್ತಾಕ್ ಅವರ ‘ಹೃದಯದ ಹಣತೆ’ ಕಥಾ ಸಂಕಲನ ಅನುವಾದಿಸಿ ಅಂತಾರಾಷ್ಟ್ರೀಯ ಖ್ಯಾತಿಗೆ ಭಾಜನರಾದವರು. ಕನ್ನಡದ ಹಲವು ಲೇಖಕರ ಕೃತಿಯನ್ನು ಸಹ ಅವರು ಇಂಗ್ಲೀಷಗೆ  ಅನುವಾದಿಸಿದ್ದಾರೆ. ಮಕ್ಕಳ ಸಾಹಿತ್ಯ ರಚನಾ ಕೃಷಿಯನ್ನು ಮಾಡಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಲೇಖನಗಳನ್ನು ಅಂಕಣಗಳನ್ನು ವಿದೇಶಿ ಪತ್ರಿಕೆಗೆ ಬರೆದ ಕೀರ್ತಿ ಅವರದಾಗಿದೆ ಎಂದು ಹೇಳಿದರು.

ಇದನ್ನೂ ಓದಿ ಧಾರವಾಡ | ಅಂಗನವಾಡಿಗೆ ಡಿಸಿ, ಸಿಇಓ ದಿಢೀರ್ ಭೇಟಿ; ಇಲಾಖೆ ಯೋಜನೆಗಳ ಪರಿಶೀಲನೆ

ಸತೀಶ ತುರಮರಿ ಸ್ವಾಗತಿಸಿದರು. ಡಾ. ಜಿನದತ್ತ ಹಡಗಲಿ ಸನ್ಮಾನ ಫಲಕ ಓದಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಶಂಕರ ಕುಂಬಿ, ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಗುರು ಹಿರೇಮಠ, ವಿಶ್ವೇಶ್ವರಿ ಬ. ಹಿರೇಮಠ, ಡಾ. ಧನವಂತ ಹಾಜವಗೋಳ, ಎಂ.ಎಂ. ಚಿಕ್ಕಮಠ, ಶ್ರೀನಿವಾಸ ವಾಡಪ್ಪಿ, ಕೃಷ್ಣಮೂರ್ತಿ ಬೆಳಗೇರಿ, ಡಾ. ಎಸ್.ಎಂ. ಶಿವಪ್ರಸಾದ ಸೇರಿದಂತೆ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...