ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, 5.20ಲಕ್ಷ ಮೌಲ್ಯದ 65 ಗ್ರಾಂ ಬಂಗಾರ ಮತ್ತು 50,000 ಸಾವಿರ ನಗದು ವಶಪಡಿಸಿಕೂಂಡಿದ್ದಾರೆ. ಮತ್ತು ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳುವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಗದಗ ಮೂಲದ ಮಹಿಳೆಯೊಬ್ಬರು ನವಲಗುಂದ ಬಸ್ ನಿಲ್ದಾಣದಲ್ಲಿ ಆಭರಣ ಕಳ್ಳತನವಾದ ಕುರಿತು ಮಾರ್ಚ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆಗೆ ವಿಶೇಷ ತಂಡ ರಚಿಸಿದ್ದ ಠಾಣಾ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಸೆ.15 ರಿಂದ ನ.21 ರವರೆಗೆ ಲಿಂಗತ್ವ ಅಲ್ಪಸಂಖ್ಯಾತರ, ದೇವದಾಸಿ ಕುಟುಂಬಗಳ ಸಮೀಕ್ಷೆ
ಉತ್ತಮ ಕರ್ತವ್ಯಕ್ಕಾಗಿ ನಿರ್ವಹಿಸಿದ್ದಾರೆ ಎಂದು ನವಲಗುಂದ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅಭಿನಂದನೆ ಸಲ್ಲಿಸಿದ್ದಾರೆ.