ಧಾರವಾಡ | ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಮಹಿಳಾ ಸಾಧಕಿಯರು ಆಯ್ಕೆ

Date:

Advertisements

ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತಿಯ ನಿಮಿತ್ತ 2025ನೇ ಸಾಲಿನ ಪ್ರಶಸ್ತಿಯನ್ನು ನೀಡುತ್ತಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ದಲಿತ ವಿದ್ಯಾರ್ಥಿ ಪರಿಷತ್ ಕೊಡಮಾಡುವ ಈ ಸಾಲಿನ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಧಾರವಾಡ ಜಿಲ್ಲೆಯಿಂದ ಇಬ್ಬರು ಮಹಿಳಾ ಸಾಧಕಿಯರು ಆಯ್ಕೆಯಾಗಿದ್ದಾರೆ.

ಸಾಮಾಜಿಕ, ಶೈಕ್ಷಣಿಕ, ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸೇವೆಗೈಯುವ ಮೂಲಕ ಗುರುತಿಸಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಸಾಹಾಯಕ ನಿರ್ದೇಶಕಿ ಎಂ. ಬಿ. ಸಣ್ಣೇರ್ ಮತ್ತು ಸಮಾಜ ಸೇವಕಿ ಪ್ರೇಮಾ ಓಬಣ್ಣ ಲಮಾಣಿ ಈ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆಯ ಅಂಗವಾಗಿ 03 ಜನೆವರಿ 2025 ರಂದು ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಧಾರವಾಡ ಜಿಲ್ಲಾಧ್ಯಕ್ಷ ಹನುಮಂತ ದಾಸರ, ಮಹಿಳಾ ಸಂಚಾಲಕಿ ದುರ್ಗಾ.ಎಚ್, ಶಾಂತಯ್ಯ ಓಸುಮಠ, ಸರೋಜಾ. ಎಸ್. ಕೆ, ಶಿವರಾಜ ಮೋತಿ, ಗಗನಕುಮಾರ್ ರಾಠೋಡ್, ರಾಕೇಶ್ ಆಯಟ್ಟಿ, ಬಸವರಾಜ, ಶಶಿಕುಮಾರ ಬಾವಚಿ, ಶಿವಾಜಿ ಎನ್. ಕೆ, ಗೀತಾ,ರವಿ, ಶ್ರೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X