ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದ ಬೈರಿದೇವರಕೊಪ್ಪ ದರ್ಗಾದ ಹತ್ತಿರ ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ನವನಗರದ ನಿವಾಸಿ ಬಸವರಾಜ್ ಈರಣ್ಣ ತೋಟಗಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಬಸವರಾಜ್ ಹುಬ್ಬಳ್ಳಿಯಿಂದ ನವನಗರದ ಕಡೆಗೆ ಆಕ್ಟಿವ್ ಹೊಂಡಾ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಡಿವೆಡೆರ್ ಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.