ಧಾರವಾಡ | ದ್ವಿಚಕ್ರ ವಾಹನ ಶೋರೂಂಗಳಿಂದ ವಂಚನೆ ಆರೋಪ; ಜಯ ಕರ್ನಾಟಕ ಸಂಘಟನೆ ಆಕ್ರೋಶ

Date:

ಕುಂದಗೋಳ ಪಟ್ಟಣದಲ್ಲಿರುವ ದ್ವಿಚಕ್ರ ವಾಹನ ಶೋರೂಂಗಳು ಸಾಲದ (ಫೈನಾನ್ಸ್‌) ಮೂಲಕ ವಾಹನ ಖರೀದಿಸುವ ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿವೆ ಎಂದು ಆರೋಪಿಸಿ, ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್ ರಾಜು ಮಾವಕರ ಅವರಿಗೆ ಮನವಿ ಸಲ್ಲಿಸಿದರು.

- Advertisement -

​ಪಟ್ಟಣದ ವೆಂಕಟೇಶ ಮೋಟಾರ್ಸ್ ಹಾಗೂ ಪವಾರ ಮೋಟಾರ್ಸ್ ಶೋರೂಂಗಳ ಎದುರು ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಶೋರೂಂ ಮಾಲೀಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕುಂದಗೋಳದ ಶೋರೂಂಗಳ ದರಕ್ಕೂ ಬೇರೆಡೆಗೂ ಅಜಗಜಾಂತರ ವ್ಯತ್ಯಾಸವಿದ್ದು, ವಿಶೇಷವಾಗಿ ಸಾಲದ ಮೂಲಕ ವಾಹನ ಖರೀದಿಸುವ ಗ್ರಾಹಕರೇ ಇವರ ಗುರಿಯಾಗಿದ್ದಾರೆ. ಪ್ರತಿ ಗ್ರಾಹಕರಿಂದ 4,000 ದಿಂದ 7,000 ರೂ. ವರೆಗೆ ಹೆಚ್ಚುವರಿ ಹಣ ದೋಚಲಾಗುತ್ತಿದೆ. ಆರ್‌ಟಿಒ ಹೈಪೋಥಿಕೇಶನ್, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ನಂತಹ ಶುಲ್ಕಗಳನ್ನು ಗ್ರಾಹಕರು ಪಾವತಿಸಬೇಕಿಲ್ಲದಿದ್ದರೂ, ಅವರಿಂದ ಅಕ್ರಮವಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಅಕ್ರಮದ ಬಗ್ಗೆ ಪ್ರಶ್ನಿಸಿದರೆ, ಇದಕ್ಕೂ ನಿಮಗೂ ಸಂಬಂಧವಿಲ್ಲ, ಕೇಳಲು ನೀವ್ಯಾರು? ಎಂದು ಮಾಲೀಕರು ಉದ್ಧಟತನ ಪ್ರದರ್ಶಿಸುತ್ತಾರೆ. ಶೋರೂಂ ಬಾಡಿಗೆ, ಸಿಬ್ಬಂದಿ ಸಂಬಳದ ನೆಪ ಹೇಳಿ ಗ್ರಾಹಕರನ್ನು ಸುಲಿಯುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ. ತಪ್ಪಿತಸ್ಥರ ವಿರುದ್ಧ ಗ್ರಾಹಕರ ಸಂರಕ್ಷಣಾ ಕಾಯ್ದೆ-2019ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ವಂಚಿತ ಗ್ರಾಹಕರೊಂದಿಗೆ ಶೋರೂಂಗಳ ಎದುರು ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ರಾಜು ಮಾವಕರ ಮಾತನಾಡಿ, ಗ್ರಾಹಕರಿಗೆ ಈ ರೀತಿ ವಂಚನೆ ಮಾಡುವುದು ತಪ್ಪು. ದೂರಿನ ಬಗ್ಗೆ ಕೂಡಲೇ ಸಂಬಂಧಪಟ್ಟ ಶೋರೂಂ ಮಾಲೀಕರನ್ನು ಕರೆಯಿಸಿ ವಿಚಾರಣೆ ನಡೆಸಿ, ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನ.03 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣಮಹೋತ್ಸವ ಕಾರ್ಯಕ್ರಮ

​ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಪ್ರವೀಣ ಮುದೆಣ್ಣವರ, ಗೌರವಾಧ್ಯಕ್ಷ ಪಾಂಡುರಂಗ ಕುಂಕೂರ, ಶಿವು ಹೊಸಮನಿ, ರವಿ ಶಿರಸಂಗಿ, ಅಶೋಕ ಘೊರ್ಪಡೆ, ದಿನೇಶ ಕಿರೇಸೂರ, ರಾಜು ಮೇಟಿ, ತಯಬ್ ಮಕಾಂದಾರ, ಹುಸೇನಸಾಬ ಹಂಚನಾಳ, ಮಂಜುನಾಥ ತಹಶಿಲ್ದಾರ, ಚಿದಾನಂದ ಕುನ್ನೂರ, ಶಿವಾನಂದ ಅರಳಿಕಟ್ಟಿ, ದಾದಾಪೀರ ಠಪಾಲ, ಶೇಖಪ್ಪ ಹೈಬತ್ತಿ, ಸಿದ್ದು ಪಾಳೆದ, ಸಂತೋಷ ಪವಾರ್, ಸದ್ದಾಂ ನಧಾಫ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...