ಧಾರವಾಡ | ಮೇ 26ರಿಂದ ದನ, ಎಮ್ಮೆಗಳಿಗೆ ಬಾಯಿ ಬೇನೆ ಲಸಿಕೆ ಹಾಕಿಸಲು ಆರಂಭ

Date:

Advertisements

ಧಾರವಾಡ ಜಿಲ್ಲೆಯಾದ್ಯಂತ ಕೇಂದ್ರ ಪುರಸ್ಕೃತ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆ ಅಡಿಯಲ್ಲಿ 7 ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಕಾರ್ಯಕ್ರಮವನ್ನು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯಿಂದ ಮೇ 26, 2025 ರಿಂದ ಪ್ರಾರಂಭವಾಗಲಿದೆ.

ಈ ಅಭಿಯಾನದಲ್ಲಿ 1.38 ಲಕ್ಷ ದನ, 47 ಸಾವಿರ ಎಮ್ಮೆಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ನಾಲ್ಕು ತಿಂಗಳ ಮೇಲ್ಪಟ್ಟ ದನ, ಎಮ್ಮೆಗಳಿಗೆ ಲಸಿಕೆ ಹಾಕಲಾಗುತ್ತದೆ. ಪ್ರಥಮ ಬಾರಿಗೆ ಲಸಿಕೆ ಪಡೆಯುವ ನಾಲ್ಕು ತಿಂಗಳ ಕರುಗಳಿಗೆ 21 ದಿನಗಳ ನಂತರ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುತ್ತದೆ.

ಈ ಲಸಿಕಾಕರಣ ಅಭಿಯಾನದಲ್ಲಿ 227 ಲಸಿಕೆದಾರರು, 45 ಮೇಲ್ವಿಚಾರಕರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಜಾನುವಾರು ಮಾಲೀಕರ ಮನೆಗಳಿಗೆ ತೆರಳಿ ಜೂನ್ 09, 2025 ರವರೆಗೆ ಲಸಿಕೆ ನೀಡಲಾಗುತ್ತದೆ. ಈ ಸುತ್ತಿನ ಲಸಿಕಾಕರಣಕ್ಕೆ 2.14 ಲಕ್ಷ ಡೋಸ್ ಲಸಿಕೆ ಸರಬರಾಜಾಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ದನ, ಎಮ್ಮೆಗಳಿಗೆ ಲಸಿಕೆ ಹಾಕಲಾಗುತ್ತದೆ.

Advertisements

ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಲಸಿಕೆದಾರರು ನಿಗದಿಪಡಿಸಿದ ಗ್ರಾಮಗಳಿಗೆ ಭೇಟಿ ನೀಡಿ, ದನ, ಎಮ್ಮೆಗಳಿಗೆ ಲಸಿಕೆ ನೀಡುತ್ತಾರೆ. ಪ್ರತಿದಿನ 100 ರಿಂದ 150 ಹಸುಗಳಿಗೆ ಲಸಿಕೆ ಹಾಕುವ ಗುರಿಯನ್ನು ನಿಗದಿಗೊಳಿಸಲಾಗಿದೆ. ಲಸಿಕೆಯನ್ನು 2 ರಿಂದ 80 ಸೆಂಟಿಗ್ರೇಡ್‍ನಲ್ಲಿ ಶೇಖರಿಸಲು ಅಗತ್ಯವಿರುವ ಶೀತಲ ಸರಪಳಿ ವ್ಯವಸ್ಥೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸರ್.ಸಿದ್ದಪ್ಪ ಕಂಬಳಿ, ಉತ್ತರ ಕರ್ನಾಟಕದಲ್ಲಿ ಅಕ್ಷರಜ್ಯೋತಿ ಪ್ರಜ್ವಲಿಸಲು ಹೋರಾಡಿದವರು: ರಾಮಪ್ಪ ಬಡಿಗೇರ

ಹಳ್ಳಿಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ಕೆ ಪಶುಸಖಿಯರು ಪ್ರಚಾರ ನೀಡುತ್ತಿದ್ದಾರೆ. ದೇಶದಲ್ಲಿ ಕಾಲು ಬಾಯಿ ಜ್ವರ ನಿರ್ಮೂಲನೆಗೊಂಡಲ್ಲಿ, ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ರಪ್ತು ಮಾಡಲು ಅವಕಾಶವಿರುವುದರಿಂದ ರೈತರಿಗೆ ಹೈನುಗಾರಿಕೆಯಿಂದ ಹೆಚ್ಚಿನ ಆದಾಯ ನಿರೀಕ್ಷಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X