ಧಾರವಾಡ | ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಿಂದ ಆರಂಭದಲ್ಲೆ ಸೋಂಕು ತಡೆಗಟ್ಟಬಹುದು: ಡಾ.‌ರತ್ನಮಾಲಾ

Date:

Advertisements

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಹುಬ್ಬಳ್ಳಿಯ ‘ಬ್ಲಿಂಗ್‌ಡೆ ಇನ್ನರ್ ವೀಲ್ ಕ್ಲಬ್’ ಮತ್ತು ‘ರೇಡಾನ್ ಕ್ಯಾನ್ಸರ್ ಫೌಂಡೇಶನ್’ ಸಹಯೋಗದೊಂದಿಗೆ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಗ್ರಾಮದ ವಿವಿಧ ಶಾಲೆಗಳ 9 ರಿಂದ 14 ವರ್ಷದೊಳಗಿನ 68 ಬಾಲಕಿಯರಿಗೆ ಉಚಿತವಾಗಿ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆ ನೀಡಿದರು. ಈ ಲಸಿಕೆಯು ಆರಂಭಿಕ ಹಂತದಲ್ಲೇ ಸೋಂಕು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಜ್ಞರು ತಿಳಿಸಿದರು. ಇದೇ ವೇಳೆ ಡಾ. ರತ್ನಮಾಲಾ ದೇಸಾಯಿಯವರು ಲಸಿಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಮಕ್ಕಳಲ್ಲಿ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ: ಸಂಜು ಧುಮುಕನಾಳ

ಈ ಸಂದರ್ಭದಲ್ಲಿ ರೇಡಾನ್ ಕ್ಯಾನ್ಸರ್ ಫೌಂಡೇಶನ್ ಅಧ್ಯಕ್ಷೆ ಶೀಲಾ ಭೂಸದ್, ಡಾ. ಶೀತಲ್ ಕುಲ್ಗೋಡ್, ಡಾ. ಕೇಲ್ಕೆ ಕುಲಕರ್ಣಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಎಫ್.ಎಸ್. ಬೆಂಗೇರಿ, ಜಿ.ಸಿ. ರಟ್ಟಿಗೇರಿಮಠ, ವಿರುಪಾಕ್ಷಗೌಡ ರಂಗನಗೌಡ್ರ, ಶಿವಪ್ಪಾ ಬಡ್ನಿ, ಸೋಮಣ್ಣ ಕಾಕಂಬಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

Download Eedina App Android / iOS

X