ಧಾರವಾಡ | ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

Date:

Advertisements

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿಡಿಯೋ ಸಂವಾದ ಮೂಲಕ ಸಭೆ ನಡೆಯಿತು.

ಈ ಸಭೆಯಲ್ಲಿ ಈಗಾಗಲೇ ನೇಮಕಾತಿ ಹೊಂದಿದ ಸಹಾಯಕ ಮತದಾರರ ನೋಂದಾಣಾಧಿಕಾರಿಗಳು, ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನಮೂನೆ-18 ರ ಅರ್ಜಿ ಫಾರ್ಮಗಳು ಲಭ್ಯವಿದ್ದು, ಸದರಿ ಅರ್ಜಿಗಳನ್ನು ಅರ್ಹ ಎಲ್ಲ ಪದವೀಧರರು ಪಡೆದು, ಅದರೊಂದಿಗೆ ಸರಿಯಾದ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ನಿರ್ದೇಶಿಸಿದರು.

ಹೊಸ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲು ನಿರ್ದೇಶಿಸಿದರು. ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೊಸದಾಗಿ ತಯಾರಿಸುತ್ತಿರುವ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ನೋಂದಾಯಿಸಲು ಸಾರ್ವಜನಿಕರಿಗೆ, ಮತದಾರರಿಗೆ ಅಗತ್ಯ ಜಾಗೃತಿ ಮೂಡಿಸಲು ನಿರ್ದೇಶನ ನೀಡಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ನಿಗದಿತ ಅವಧಿಗಿಂತ ಮೊದಲು ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ ಗುಡೇನಕಟ್ಟಿ’ಗೆ ಸನ್ಮಾನ

ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನೀಡಿದ ನಿರ್ದೇಶನದಂತೆ ಅಗತ್ಯ ಕ್ರಮಕೈಗೊಳ್ಳಲು ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಾಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X