ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿತ; ಇಬ್ಬರು ಕೂಲಿ ಕಾರ್ಮಿಕರ ದುರ್ಮರಣ

Date:

Advertisements

ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಹಳೇ ಹುಬ್ಬಳ್ಳಿಯ ಧಾರವಾಡ ಪ್ಲಾಟ್ ನಿವಾಸಿ ದಾವೂದ್ ಸವಣೂರು (52), ನೂರಾಣಿ ಪ್ಲಾಟ್ ನಿವಾಸಿ ರಫಿಕ್‌ಸಾಬ್ ಚನ್ನಾಪುರ (50) ಎಂದು ಗುರುತಿಸಲಾಗಿದೆ. ಗಾಯಾಳು ಹುಬ್ಬಳ್ಳಿ ಮೂಲದ ಮಹಾಂತೇಶ ಚವರಗುಡ್ಡಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಧಾರವಾಡ | ಫೆ. 7 ರಂದು ಅಂಬೇಡ್ಕರ್ ಓದು ಕಾರ್ಯಕ್ರಮ

Advertisements

ನಿರ್ಮಾಣ ಆಗುತ್ತಿರುವ ಕಟ್ಟಡದ ಗಾರೆ ಕೆಲಸಕ್ಕೆ ಕೂಲಿ ಕಾರ್ಮಿಕರು ತೆರಳಿದ್ದರು. ಮಳೆ, ಗಾಳಿ ಜೋರಾಗಿ ಬೀಸಿದ್ದರಿಂದ ಗೋಡೆಯ ಬಳಿ ನಿಂತಿದ್ದರು. ಗಾಳಿ ರಭಸಕ್ಕೆ ಗೋಡೆ ಕುಸಿದು ಕೆಳಗೆ ಬಿದ್ದಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X