ಧಾರವಾಡ | ಬೇಸಿಗೆ ಆರಂಭದಲ್ಲೇ ಉಲ್ಬಣಿಸಿದ ನೀರಿನ ಸಮಸ್ಯೆ, ಗ್ರಾಮಗಳು ಕಂಗಾಲು

Date:

Advertisements

ಬೇಸಿಗೆ ಆರಂಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸ್ಥಿತಿ ತಾರರಕ್ಕೆ ಹೋಗುವ ಸಾಧ್ಯತೆ ಗೋಚರವಾಗುತ್ತಿದೆ. ಸಮಸ್ಯೆ ನಿವಾರಣೆಗೆ ಮತ್ತು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಜಿಲ್ಲೆಯ ಬರಪೀಡಿತ ಪ್ರತೀ ತಾಲೂಕಿಗೆ 25 ಲಕ್ಷ ರೂ.ದಂತೆ ಎಂಟು ತಾಲೂಕುಗಳಿಗೆ ತಾತ್ಕಾಲಿಕವಾಗಿ 2 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ.

ಧಾರವಾಡ ತಾಲೂಕಿನಲ್ಲಿ ಪ್ರಸ್ತುತ 17 ಗ್ರಾಮ, ಹುಬ್ಬಳ್ಳಿ ತಾಲೂಕು ವ್ಯಾಪ್ತಿಯ 16 ಗ್ರಾಮ, ಕುಂದುಗೋಳ ತಾಲೂಕಿನ 15 ಗ್ರಾಮಗಳು, ಕಲಘಟಗಿ ತಾಲೂಕಿನ 54, ನವಲಗುಂದ ತಾಲೂಕಿನ 16, ಅಣ್ಣಿಗೇರಿಯ 12 ಮತ್ತು ಅಳ್ನಾವರ ತಾಲೂಕಿನ 9 ಗ್ರಾಮಗಳು ಸೇರಿ ಒಟ್ಟು 139 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಜಿಲ್ಲಾಡಳಿತ ಗುರುತಿಸಿದೆ.

ಕುಂದಗೋಳ ತಾಲೂಕಿನ ಶಿರೂರು, ಬೆಳ್ಳಿಗಟ್ಟಿ, ಸಂಶಿ, ಕೊಡ್ಲಿವಾಡ, ಬೆನಕನಹಳ್ಳಿ ಸೇರಿ 8 ರಿಂದ 10 ಗ್ರಾಮಗಳಲ್ಲಿ, ಕಲಘಟಗಿ ತಾಲೂಕಿನ ಮಿಶ್ರಿಕೋಟೆ, ಸಂಗಮೇಶ್ವರ, ಸುಳಕಟ್ಟಿ, ಆಲದಕಟ್ಟಿ ಸೇರಿ ಹಲವು ಗ್ರಾಮಗಳಲ್ಲಿ ಹೆಚ್ಚಿನ ಕುಡಿಯುವ ನೀರಿನ ಸಮಸ್ಯೆ ಇದೆ. ಟ್ಯಾಂಕ್‌ಗಳ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಕೋರಿದರೆ, ಇಂದಿಗೂ ಸ್ಪಂದಿಸುತ್ತಿಲ್ಲ. ಒಂದು ವಾರದೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಖಾಲಿ ಕೊಡಗಳ ಸಮೇತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರತ್ನ ಭಾರತ ರೈತ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.

Advertisements

ಕೆಲವೆಡೆ ಕೊಳವೆಬಾವಿಗಳ ಅಂತರ್ಜಲ ಮಟ್ಟ ಕುಸಿದಿದ್ದು, ತಾಲೂಕಿನಲ್ಲಿ ಹೆಚ್ಚು ನೀರು ಬರುವ 43 ಕೊಳವೆಬಾವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ನೀರಿನ ಸಮಸ್ಯೆ ಉಂಟಾದಲ್ಲಿ ಆ ಕೊಳವೆಬಾವಿಗಳ ಮೂಲಕ ನೀರು ಪಡೆದು ಜನರಿಗೆ ಪೂರೈಸುವ ಚಿಂತನೆಯಿದೆ ಎಂದು ಪಂಚಾಯತ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಉಮಚಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ಉಲ್ಬಣಗೊಂಡಿದೆ. ಈ ಗ್ರಾಮದಲ್ಲಿ ಸುಮಾರು 2500 ಜನಸಂಖ್ಯೆ ಇದೆ. ಗ್ರಾಮಕ್ಕೆ ನಿತ್ಯ ಮೂರು ಟ್ಯಾಂಕರ್‌ಗಳ ಮೂಲಕ 24 ಸಾವಿರ ಲೀಟರ್‌ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ ಎಂದು ಪಂಚಾಯತ್‌ ಅಧಿಕಾರಿಗಳು ಮಾಹಿತಿ ನಿಡಿದ್ದಾರೆ.

ಇನ್ನು, ಉಮಚಗಿ ಗ್ರಾಮದಲ್ಲಿ ಮಳೆಗಾಲದಲ್ಲಿ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಕೆರೆ ನಿರ್ಮಿಸಲಾಗಿತ್ತು, ಈ ಕೆರೆಯಲ್ಲಿ 2 ವರ್ಷಗಳಿಗೆ ಆಗುವಷ್ಟು ನೀರು ಸಂಗ್ರಹವಾಗಿತ್ತು. ಆದರೆ, ಕಳೆದ ಡಿಸೆಂಬರ್‌ನಲ್ಲಿ ಗ್ರಾಮದ ವ್ಯಕ್ತಿಯೊಬ್ಬರು ಕೆರೆಯಲ್ಲಿ ಬಿದ್ದು ಮೃತಪಟ್ಟರು ಎಂಬ ಕಾರಣಕ್ಕೆ ಗ್ರಾಮದ ಜನ ಕೆರೆಯಲ್ಲಿದ್ದ ನೀರನ್ನು ಮೋಟರ್‌ಹಚ್ಚಿ ಹೊರಗೆ ಹಾಕಿ ಇಡೀ ಕೆರೆಯನ್ನೇ ಖಾಲಿ ಮಾಡಿದ್ದರು. ಇದೀಗ ಇಡೀ ಗ್ರಾಮವು ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಒಟ್ಟಿನಲ್ಲಿ ಜಿಲ್ಲೆಯ ಅನೇಕ ಗ್ರಾಮಗಳು ಬೇಸಿಗೆ ಆರಂಭದಲ್ಲೆ ನೀರಿನ ಸಮಸ್ಯೆ ಅನುಭವಿಸುತ್ತಿದ್ದು ಇನ್ನೂ ಮಧ್ಯ ಬೇಸಿಗೆಯಲ್ಲಿನೀರಿಗೆ ಉಂಟಾಗಬಹುದಾದ ತ್ವಾರದ ಬಗ್ಗೆ ಯೋಚಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

Download Eedina App Android / iOS

X