ಧಾರವಾಡ | ನೀರು ಪೂರೈಕೆ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕು: ಸಚಿವ ಸಂತೋಷ್‌ ಲಾಡ್

Date:

Advertisements

ನೀರಿನ ಸಮಸ್ಯೆಯಿಂದ ಜನರು ತತ್ತರಿಸುತ್ತಿದ್ದಾರೆ. ಹಾಗಾಗಿ ನೀರು ಪೂರೈಕೆಯ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ತಿಳಿಸಿದರು.

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ನಡೆದ ಧಾರವಾಡ ಜಿಲ್ಲೆಯ ಪ್ರಗತಿ ಪರಿಸೀಲನಾ ಸಭೆಯಲ್ಲಿ ಮಾತನಾಡಿದರು.

“ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಲಪ್ರಭಾ ನದಿಯ ನೀರು ಸಮರ್ಪಕವಾಗಿ ಗ್ರಾಮಗಳಿಗೆ ಸರಬರಾಜು (ಪೂರೈಕೆ) ಕಾಮಗಾರಿ ವ್ಯವಸ್ಥೆ ಮತ್ತು ಹೆದ್ದಾರಿ ರಸ್ತೆ ಅಗಲೀಕರಣ ಮಾಡುವ ಕಾರ್ಯಗಳು ಸಮರ್ಪಕವಾಗಿ ವೇಗಗತಿಯಲ್ಲಿ ನಡೆಯಬೇಕು” ಎಂದು ತಿಳಿಸಿದರು.

Advertisements

“ಜಿಲ್ಲೆಯ ಗ್ರಾಮೀಣರ ಬಹುದಿನಗಳ ಬೇಡಿಕೆಯಾದ ಮಲಪ್ರಭಾ ನದಿಯಿಂದ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿ ನಿಧಾನವಾಗಿ ಸಾಗುತ್ತಿದೆ. ಕಾಮಗಾರಿಯನ್ನು ಚುರುಕುಗೊಳಿಸಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ಕಳಪೆ ಆಗದೇ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಉದ್ಯಾನಗಳಲ್ಲಿ ಉದಯರಾಗ, ಸಂಧ್ಯಾರಾಗ ಕಾರ್ಯಕ್ರಮ ಪುನರಾರಂಭ

“ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿಯಾರುವ ಕಾರಣ ಸರಿಯಾದ ನಿಟ್ಟಿನಲ್ಲಿ ಕಾಮಗಾರಿಗಳು ನಡೆಯಬೇಕು” ಎಂದು ಹೇಳಿದರು.

ಕರ್ನಾಟಕ ಕಾರ್ಮಿಕ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ, ಜಿಲ್ಲೆಯ ಇತರೆ ಅಧಿಕಾರಿಗಳು, ಜಿಲ್ಲಾ ಶಾಸಕರುಗಳು ಇದ್ದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X