ಧಾರವಾಡ | ನಂಜುಂಡಪ್ಪ ವರದಿ ಅನುಷ್ಠಾನದ ಕುರಿತು ಅಕ್ಟೋಬರ್‌ಗೆ ತಿಳಿಸುತ್ತೇವೆ: ಗೋವಿಂದರಾವ್

Date:

ಪ್ರಾದೇಶಿಕ ಅಸಮತೋಲನ ಹಿನ್ನೆಲೆಯಲ್ಲಿ ನೀಡಲಾಗಿದ್ದ ನಂಜುಂಡಪ್ಪ ವರದಿಯು ಎಷ್ಟರ ಮಟ್ಟಿಗೆ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂಬುದರ ಕುರಿತು ರಾಜ್ಯದ 26 ಜಿಲ್ಲೆಗಳಿಗೆ ಪ್ರವಾಸ ಮಾಡಿ ಅಧ್ಯಯನ ಮಾಡಿದ್ದು, ಬರುವ ಅಕ್ಟೋಬರ್‌‌ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಗೋವಿಂದರಾವ್‌ ಹೇಳಿದರು.

- Advertisement -

ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರೆದಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಡಾ.ಡಿ.ಎಂ.ನಂಜುಂಡಪ್ಪ ವರದಿಯಾಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸ್ಸು ಮಾಡುವ ಹಿನ್ನಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಾದೇಶಿಕ ಅಸಮತೋಲನ ಹಿನ್ನೆಲೆಯಲ್ಲಿ ನಂಜುಂಡಪ್ಪ ವರದಿ ಅನ್ವಯ ರಾಜ್ಯದ 114 ತಾಲೂಕುಗಳಲ್ಲಿ 22 ವರ್ಷಗಳಲ್ಲಿ ರಾಜ್ಯ ಸರ್ಕಾರ ರೂ. 31 ಸಾವಿರ ಕೋಟಿ ವೆಚ್ಚ ಮಾಡಿದೆ. ಈ ಅವಧಿಯಲ್ಲಿ ಯಾವ ತಾಲೂಕು ಅಭಿವೃದ್ಧಿಗೊಂಡಿದೆ, ಯಾವ ತಾಲೂಕು ಇನ್ನೂ ಹಿಂದುಳಿದಿದೆ ಎಂಬುದನ್ನು ಅರಿಯಲು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ.

ರಾಜ್ಯದಲ್ಲಿ ನಡೆಸಿದ ಪ್ರವಾಸದಲ್ಲಿ ನಾಲ್ಕು ವಿಭಾಗಗಳಲ್ಲಿ ಕಲ್ಯಾಣ ಕರ್ನಾಟಕ ಇನ್ನೂ ಹಿಂದುಳಿದ ಪ್ರದೇಶಗಳು ಹೆಚ್ಚಿದ್ದು, ಕಿತ್ತೂರು ಕರ್ನಾಟಕ ಅಂತ್ಯಂತ ಹಿಂದುಳಿದ ತಾಲೂಕುಗಳು ಇಲ್ಲದೇ ಇದ್ದರೂ ಹಿಂದುಳಿದ ಪ್ರದೇಶಗಳಿವೆ. ಹೀಗಾಗಿ ತಾಲೂಕು ಮಟ್ಟದಲ್ಲಿ ಹೋಗಿ, ಅಧ್ಯಯನ ಮಾಡಿ, ನಾವು ವರದಿ ಸಲ್ಲಿಸಲಿದ್ದೇವೆ. ನಂಜುಂಡಪ್ಪ ವರದಿ ಅನ್ವಯ ಪ್ರಾದೇಶಿಕ ಅಸಮತೋಲನಕ್ಕೆ ಬಿಡುಗಡೆಯಾದ ಹಣ ಸರಿಯಾಗಿ ಹಂಚಿಕೆ ಆಗದಿರುವುದು ಸೇರಿದಂತೆ ಹಲವು ಅಂಶಗಳ ಕುರಿತು ಅಧ್ಯಯನ ಮಾಡುತ್ತೇವೆ. ಮುಂದಿನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಮಿತಿ ಕಾರ್ಯೋನ್ಮುಖವಾಗಿದೆ ಎಂದರು.

ಇದನ್ನು ಓದಿದ್ದೀರಾ? ಧಾರವಾಡ | ಯುವಪೀಳಿಗೆ ಮೊಬೈಲ್ ಪ್ರಪಂಚದಲ್ಲಿ ಸಾಮಾಜಿಕ ಜವಾಬ್ದಾರಿ ಮರೆಯುತ್ತಿದೆ: ಶಿವಪ್ರಸಾದ್

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಅಭಿವೃದ್ಧಿಯಲ್ಲಿ ಭೌತಿಕ ಹಾಗೂ ಆಂತರಿಕ ಪ್ರಗತಿ ಮುಖ್ಯವಾಗಿದೆ. ಗ್ರಾಮೀಣ ಮಟ್ಟದಲ್ಲಿ ಹೆಚ್ಚು ಹೆಚ್ಚು ಹೂಡಿಕೆ ಆಗಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...