ಧಾರವಾಡದ ನೀರಾವರಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ನೌಕರಸ್ಥ ಮಹಿಳೆ ಬೇಂದ್ರೆ ನಗರ ಸಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಕೋರ್ಟ್ ಬಳಿ ನಡೆದಿದೆ.
ಮೃತ ಮಹಿಳೆ ಇಂದುಮತಿ ಕಾಂಬಳೆ ನೌಕರಿ ಮುಗಿಸಿಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ನಂತರ ಮೃತದೇಹವನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.