ಧಾರವಾಡ | ಮಹಿಳೆಯರು ಸಾಕ್ಷರತೆಯಿಂದ ಸಂವಿಧಾನದ ಆಶಯಗಳನ್ನು ಅರಿಯಬೇಕು: ಶಂಕರ್ ಹಲಗತ್ತಿ

Date:

Advertisements

ಮಹಿಳೆಯರು ಸಾಕ್ಷರತೆಯ ಮೂಲಕ ಸಂವಿಧಾನದ ಆಶಯಗಳನ್ನು ಅರಿಯಬೇಕು. ಮಹಿಳೆಯರು ಅಕ್ಷರ ಕಲಿತು ತಮ್ಮ ಮೇಲಾಗುತ್ತಿರುವ ಶೋಷಣೆಯನ್ನು ಅರ್ಥಮಾಡಿಕೊಳ್ಳಬೇಕು. ಇಂದಿನ ಸಂಕೀರ್ಣ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ‘ಶಿಕ್ಷಣ ಮಂಟಪ’ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಮಾತನಾಡಿ, ಸಾಕ್ಷರತೆಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಇದು ನಮ್ಮ ದೇಶದ ಪ್ರತಿಷ್ಠೆಯ ಸಂಕೇತವಾಗಿದೆ. ತೊಂಬತ್ತರ ದಶಕದಲ್ಲಿ ಸಾಕ್ಷರತಾ ಆಂದೋಲನವು ಸ್ವಾತಂತ್ರ್ಯಾನಂತರದ ಎರಡನೇ ಅಲೆ ಆಗಿ ರೂಪುಗೊಂಡು ಇತಿಹಾಸ ಸೃಷ್ಟಿಸಿತು. ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಪ್ರಮುಖ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಮುಕ್ತರಾಗಲು ಸಾಕ್ಷರತೆ ಪ್ರಮುಖ ಸಾಧನವಾಗಿದೆ ಎಂದು

ಈ ವೇಳೆ ಸತ್ಯಸಾಯಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಎನ್. ಮಂಜುನಾಥ, ಸದಸ್ಯ ಕೃಷ್ಣಮೂರ್ತಿ ನಾಡಿಗೇರ, ಶಂಕರ ಕುಂಬಿ, ಎನ್.ವೈ. ಸುಣಗಾರ, ಅಶ್ವಿನಿ ಇಂಚಲ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕ ನಿರ್ದೇಶಕ ಜಿ.ಎಂ. ಗಣಾಚಾರ, ಶ್ರೀಶೈಲ ರಾಚಣ್ಣವರ ಮಾತನಾಡಿದರು. ಕ.ವಿ.ವ. ಸಂಘದ ಕೋಶಾಧ್ಯಕ್ಷ ಸತೀಶ ತುರಮರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಸಾಕ್ಷರತಾ ಕಾರ್ಯಕ್ರಮದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ವಿಜಯಕಲಾ ಬಡಿಗೇರ’ನ್ನು ಸನ್ಮಾನಿಸಿ ಗೌರವಿಸಿದರು. ಪ್ರೊ. ಸವಿತಾ ಪೋತದಾರ ಸ್ವಾಗತಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ ಎಲಿಗಾರ ವಂದಿಸಿದರು. ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X