ಧಾರವಾಡ | ಯುವಜನ ಶಿಬಿರ; ಸತ್ಯ ವಿಶ್ಲೇಷಣೆ ಮನೋಭಾವ ಬೆಳೆಸಿಕೊಳ್ಳಲು ಕರೆ

Date:

ಯುವ ಜನರಲ್ಲಿ ಉದಾತ್ತ ವೈಚಾರಿಕತೆ, ಉನ್ನತ ನೀತಿ, ನೈತಿಕತೆ, ಮೌಲ್ಯ ಪ್ರಜ್ಞೆ, ಸಂಸ್ಕೃತಿ ಬೆಳೆಸಲು ಧಾರವಾಡದ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಯುವಜನ ಸಂಘಟನೆಯ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಯುವಜನ ಶಿಬಿರವನ್ನು ಆಯೋಜಿಸಿತ್ತು.

- Advertisement -

ಶಿಬಿರದ ಮೊದಲ ಗೋಷ್ಠಿಯಲ್ಲಿ ʼವೈಚಾರಿಕತೆ ಮತ್ತು ಯುವಜನತೆʼ ಎಂಬ ವಿಷಯದ ಕುರಿತು ಏಐಡಿವೈಓ ರಾಜ್ಯ ಖಜಾಂಚಿ ಜಯಣ್ಣ ಮಾತನಾಡಿ, ಭಾರತ ಸ್ವಾತಂತ್ರ್ಯ ಸಂಗ್ರಾಮದ ರಾಜರಹಿತ ಪಂಥದ ಕ್ರಾಂತಿಕಾರಿಗಳ ಆಶಯಗಳಾದ ಶೋಷಣೆ, ಅಸಮಾನತೆ ರಹಿತ ಸಮಾಜವಾದಿ ಭಾರತದ ಕನಸು ನುಚ್ಚು ನೂರಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬಂಡವಾಳಶಾಹಿ ವ್ಯವಸ್ಥೆ ಅಸ್ತಿತ್ವಕ್ಕೆ ಬಂದು ಎಲ್ಲ ಕ್ಷೇತ್ರಗಳಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿವೆ. ಶಿಕ್ಷಣ, ಆರೋಗ್ಯ ಕ್ಷೇತ್ರದ ಖಾಸಗಿಕರಣ- ವ್ಯಾಪಾರೀಕರಣ, ಬೆಲೆ ಏರಿಕೆ, ನಿರುದ್ಯೋಗ, ಬಡತನ, ಮಹಿಳೆಯರ ಮೇಲಿನ ಅಪರಾಧಗಳು ತೀವ್ರವಾಗಿ ಹೆಚ್ಚಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಇಂದು ಒಂದೆಡೆ ಸಮಾಜವನ್ನು ಮುನ್ನಡೆಸುವ ಪ್ರಗತಿಪರ ಚಿಂತನೆಗಳು ಅಸ್ತಿತ್ವದಲ್ಲಿದ್ದರೆ, ಇನ್ನೊಂದೆಡೆ ಸಮಾಜದ ಪ್ರಗತಿಯನ್ನು ತಡೆಗಟ್ಟುವ ಪ್ರತಿಗಾಮಿ ವಿಚಾರಗಳು ಕೂಡಾ ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಹಳೆಯ ಊಳಿಗಮಾನ್ಯ ವಿಚಾರಗಳನ್ನ ತೆಗೆದುಹಾಕುವ ನಿಟ್ಟಿನಲ್ಲಿ ಪ್ರಮುಖವಾಗಿ ಸಾಂಸ್ಕೃತಿಕ ಹೋರಾಟ ನಡೆಯಲಿಲ್ಲ. ಹಾಗಾಗಿ ಸಮಾಜದ ಪ್ರಗತಿಯ ಹಂತದಲ್ಲಿ ಒಡಮೂಡಬೇಕಿದ್ದ ಪ್ರಜಾಸತ್ತಾತ್ಮಕ ಮೌಲ್ಯಗಳಾದ ಸಮಾನತೆ, ಭಾತೃತ್ವ, ಜಾತ್ಯತೀತತೆಯಂತಹ ವಿಚಾರಗಳು ಆಳವಾಗಿ ಬೇರೂರಲಿಲ್ಲ. ಅಂಧವಾಗಿ ಯಾವುದನ್ನೂ ಒಪ್ಪಿಕೊಳ್ಳದೆ, ಪ್ರತಿಯೊಂದು ಹಳೆಯ ವಿಚಾರಗಳನ್ನು ಪ್ರಶ್ನಿಸುವ ಮತ್ತು  ಸತ್ಯವನ್ನು ಅರಿಯಲು ವಿಚಾರಗಳನ್ನು ತಾರ್ಕಿಕವಾಗಿ ಯೋಚಿಸುವ, ವೈಜ್ಞಾನಿಕವಾಗಿ ವಿಶ್ಲೇಷಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಎರಡನೇ ಗೋಷ್ಠಿಯಲ್ಲಿ ʼಪ್ರಸಕ್ತ ಸಾಮಾಜಿಕ ತಲ್ಲಣಗಳು, ಯುವಜನರ ಮುಂದಿರುವ ಕರ್ತವ್ಯಗಳುʼ ಎಂಬ ವಿಷಯದ ಕುರಿತು ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಧಾರವಾಡ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ ಮಾತನಾಡಿ, ಒಂದೆಡೆ ದೇಶದ ಕೆಲವೇ ಶ್ರೀಮಂತರು ಇಡೀ ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಶೇ. 90ಕ್ಕೂ ಹೆಚ್ಚಿರುವ ದುಡಿಯುವ ಜನರು ಜೀವನ ನಡೆಸುವುದು ದುಸ್ತರವಾಗಿದೆ. ಇಂತಹ ಅನ್ಯಾಯದ ವಿರುದ್ಧ ಧ್ವನಿ ಎತ್ತ ಬೇಕಾಗಿರುವ ಯುವಜನರ ಮನಸ್ಸಿನಲ್ಲಿ ಜಾತಿ-ಧರ್ಮ, ಕೋಮು ಗಲಭೆ, ಧರ್ಮಾಂಧತೆಗಳಂತಹ ವಿಚಾರಗಳನ್ನು ನಮ್ಮನ್ನು ಆಳುವ ಸರ್ಕಾರಗಳು ಬಿತ್ತುತ್ತಿವೆ ಎಂದು ಬೇಸರಿಸಿದರು.

ಯುವಜನರ ನೈತಿಕ ಬೆನ್ನೆಲುಬು ಮುರಿಯಲು ಅಶ್ಲೀಲ ಸಿನಿಮಾ ಸಾಹಿತ್ಯದ ಪ್ರಚಾರ, ಮದ್ಯ-ಮಾದಕ ವಸ್ತುಗಳನ್ನು ಮಾರಾಟ ಮಾಡಲು ಅನುಮತಿ ನೀಡುತ್ತಿವೆ. ಆದ್ದರಿಂದ ಎಲ್ಲ ರೀತಿಯ ಸಾಮಾಜಿಕ ಪಿಡುಗುಗಳನ್ನು ತೊಲಗಿಸಲು, ಕ್ರಾಂತಿಕಾರಿಗಳ ಹೋರಾಟದ ಬದುಕಿನ ಸಾರವನ್ನು ಗ್ರಹಿಸಿ, ಉನ್ನತ ನೀತಿ, ಸಂಸ್ಕೃತಿ ಆಧಾರದಲ್ಲಿ ಹೋರಾಟ ಕಟ್ಟಲು ಕ್ರಾಂತಿಕಾರಿ ವಿಚಾರ ಮತ್ತು ಕ್ರಾಂತಿಕಾರಿ ಯುವಜನ ಸಂಘಟನೆಯ ಅವಶ್ಯಕವಿದೆ. ಈ ನೆಲದ ಕ್ರಾಂತಿಕಾರಿ ಯುವಜನ ಸಂಘಟನೆ ಏಐಡಿವೈಓ ಈ ವಿಚಾರಗಳ ಆಧಾರದಲ್ಲಿ ದೇಶಾದ್ಯಂತ ಯುವಜನರನ್ನು ಸಂಘಟನೆ ಮಾಡುತ್ತಿದ್ದು ಯುವಜನರು ತಮ್ಮ ಊರುಗಳಲ್ಲಿ, ಬಡಾವಣೆಗಳಲ್ಲಿ ಸಂಘಟನೆ ಕಟ್ಟಲು ಮುಂದಾಗಬೇಕು ಎಂದರು.

ಏಐಡಿವೈಒ ಜಿಲ್ಲಾಧ್ಯಕ್ಷ ಭವಾನಿ ಶಂಕರ್, ಜಿಲ್ಲಾ ಕಾರ್ಯದರ್ಶಿ ರಣಜಿತ್ ದೂಪದ್, ಪ್ರೀತಿ ಸಿಂಗಾಡಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿ ಯುವಜನರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...