ಧಾರವಾಡ | ಹುಬ್ಬಳ್ಳಿಗೆ ಕಾಲಿಟ್ಟ ಯುವ ಪರಿವರ್ತನೆ ಯಾತ್ರೆ

Date:

ಜನಸಾಮಾನ್ಯರ ವೇದಿಕೆ ವತಿಯಿಂದ ಬೀದರ್ ನಿಂದ ಬೆಂಗಳೂರು ವರೆಗೆ ಜನಪರ ಯಾತ್ರೆ ಯುವಜನರ ಪರಿವರ್ತನೆಗಾಗಿ ಯುವ ಪರಿವರ್ತನೆ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಈ ಯಾತ್ರೆಯು ಹುಬ್ಬಳ್ಳಿ ತಲುಪಿ ಅಲ್ಲಿಂದ ಹಾವೇರಿ ಕಡೆಗೆ ಸಾಗಿತು.

- Advertisement -

ಈ ವೇಳೆ ವಕೀಲ ಹಾಗೂ ಜನಸಾಮಾನ್ಯರ ವೇದಿಕೆಯ ಸಂಚಾಲಕ ಯಲ್ಲಪ್ಪ ಹೆಗಡೆ ಮಾತನಾಡಿ, ಅಕ್ಟೋಬರ್ 2ರಿಂದ ಈ ಯಾತ್ರೆಯೂ ಶುರುವಾಗಿದ್ದು, ಬೀದರ್ ನಿಂದ ಹಿಡಿದು ಕಲಬುರ್ಗಿ, ಯಾದಗಿರಿ, ಹುಬ್ಬಳ್ಳಿ ಹೀಗೆ ಒಟ್ಟು 12 ಜಿಲ್ಲಾ ಕೇಂದ್ರಗಳ ಪ್ರವೇಶ ಮಾಡಿ ಆರ್ಥಿಕ ಸಾಮಾಜಿಕ ಶೈಕ್ಷಣಿಕ ರಾಜಕೀಯ ವ್ಯವಸ್ಥೆಯ ಬದಲಾವಣೆಗಾಗಿ ಯುವಕರನ್ನು ತಲುಪುವುದೇ ಈ ಯಾತ್ರೆಯ ಉದ್ದೇಶವಾಗಿದೆ. ಯುವಕರು ಈ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತಾಗಿ ಚರ್ಚೆಗೆ ಇಳಿಯಬೇಕು ಎಂದು ಯುವಜನತೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಆಳುವ ಸರ್ಕಾರಗಳು ಮತ್ತು ವಿರೋಧ ಪಕ್ಷಗಳು ಈ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಮತ್ತು ಹೆಸ್ಕಾಂ ಗಳನ್ನು ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸುತ್ತೇವೆ ಅದನ್ನು ಸರ್ಕಾರ ನಿಲ್ಲಿಸಬೇಕು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರ್ನಾಟಕ ಸಂಗ್ರಾಮ್ ಸೇನೆಯ ಸಂಜು ಧುಮಕನಾಳ ಮಾತನಾಡಿ, ಇಂತಹ ಜಾಗೃತಿ ಯಾತ್ರೆಗಳನ್ನು ಮಾಡಬೇಕಾದರೆ ಧೈರ್ಯ ಇರಬೇಕಾಗುತ್ತದೆ. ಹೀಗಾಗಿ ಯುವಕರು ಜಾಗೃತರಾಗಬೇಕು. ಇಂತಹ ಜಾಗೃತ ಯಾತ್ರೆಗಳಿಗೆ ಹೆಚ್ಚೆಚ್ಚು ಯುವಕರು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದರು.

ಅಭಿಗೌಡ ಮಾತನಾಡಿ, ಯಾತ್ರೆಗೆ ಎಲ್ಲ ಜಿಲ್ಲೆಗಳಲ್ಲೂ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಧಾರವಾಡದ ಯುನಿವರ್ಸಿಟಿಯ ವಿದ್ಯಾರ್ಥಿಗಳ ಜ್ವಲಂತ ಸಮಸ್ಯೆ ಕುರಿತು ಚರ್ಚಿಸಲಾಯಿತು. ಇದೊಂದು ಸಂವಿಧಾನ ಬದ್ಧವಾದ ಸಂಘಟಿತ ಹೋರಾಟವಾಗಿ ಪರಿವರ್ತನೆಯಾಗಬೇಕು ಎಂದಾಗ ಅಲ್ಲಿನ ವಿದ್ಯಾರ್ಥಿಗಳೆಲ್ಲ ಬೆಂಬಲ ಸೂಚಿಸಿದ್ದಾರೆ ಎಂದರು.

ನಗರದ ಮಂಜುನಾಥ್ ಕೊಂಡಪಲ್ಲಿ ಸಂಗೊಳ್ಳಿ ರಾಯಣ್ಣ ಪುತ್ತಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿ, ಹುಬ್ಬಳ್ಳಿಯ ಎಲ್ಲಾ ಸಂಘಟನೆಗಳ ಪರವಾಗಿ ಪರಿವರ್ತನೆ ಯಾತ್ರೆಗೆ ಸ್ವಾಗತವನ್ನು ಕೋರಿದರು. ಸಮಾಜವನ್ನು ಹಲವು ಸಮಸ್ಯೆಗಳು ಕಾಡುತ್ತಿವೆ ಅದರಲ್ಲಿ ಮುಖ್ಯವಾಗಿ ಮಾದಕ ವಸ್ತುಗಳ ಬಳಕೆ ವಿಪರೀತವಾಗಿದೆ ಇದರಿಂದ ಯುವಜನತೆ ಹೊರಬರಬೇಕಿದೆ ಎಂದರು.

ಹಾಕ್ಕೋತ್ತಾಯಗಳು:
• ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
• ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು.
• UPSC ಮಾದರಿಯಲ್ಲಿ KPSC ಅನ್ನು ಸುಧಾರಿಸಬೇಕು.
• ಖಾಸಗಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಪ್ರಾಮುಖ್ಯತೆ ಕಲ್ಪಿಸಬೇಕು.
• ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಅನ್ನು ಪ್ರಕಟಿಸಬೇಕು.
• ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ ಮಾಡಿ ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು.
• ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡಬೇಕು.
• ಕೃಷಿ ಉತ್ಪನ್ನಗಳಿಗೆ ಎಲ್ಲ ಋತುಗಳಲ್ಲಿ ಖಾತ್ರಿ ಬೆಲೆಯನ್ನು ಒದಗಿಸಬೇಕು.
• ರೈತರಿಗೆ ಗುಣಮಟ್ಟದ ಬೆಳೆ ಆಧಾರಿತ ಬೀಜ ಕಿಟ್ ಗಳನ್ನು ಬಿತ್ತನೆಯ ಸಕಾಲದಲ್ಲಿ ಒದಗಿಸಬೇಕು.
• ಗ್ರಾಮೀಣ ಪ್ರದೇಶದಲ್ಲಿ ಕೃಷಿ ಉತ್ಪನ್ನಗಳಿಂದ ಆಹಾರ ತಯಾರಿಕಾ ತರಬೇತಿ ನೀಡಿ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಒದಗಿಸಬೇಕು.
• ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು.
• ಗ್ರಾಮೀಣರಿಗೆ ಶಿಕ್ಷಣ, ತಂತ್ರಜ್ಞಾನ ಹಾಗೂ ಮಾರುಕಟ್ಟೆಗಳಿಗೆ ಹತ್ತಿರವಾಗಿರುವಂತೆ ಗುಣಮಟ್ಟದ ಬಸ್ಸುಗಳನ್ನು ಒದಗಿಸಬೇಕು.
• ಸರಕಾರಿ ಕಾಮಗಾರಿಗಳ ಗುತ್ತಿಗೆ ಪ್ರಕ್ರಿಯೆಯಲ್ಲಿ ಎಸ್ಸಿ/ಎಸ್ಟಿ ಮತ್ತು 2a ಗುತ್ತಿಗೆ ಮೀಸಲಾತಿಯನ್ನು ಜಾರಿಗೆ ತರಬೇಕು.
• ಮಹಿಳೆಯರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಲೋಕಸಭೆ ಹಂತದವರೆಗೂ ರಾಜಕೀಯ ಮೀಸಲಾತಿಯನ್ನು ಒದಗಿಸಬೇಕು.

ಪರಿವರ್ತನೆ ಯಾತ್ರೆಯಲ್ಲಿ ಯುವಕರು ಸ್ಥಳೀಯ ಸಂಘಟಕರು, ಯುವಕರು, ಹೋರಾಟಗಾರರು ಭಾಗವಹಿಸಿದ್ದರು. ಸಂಜು ಧುಮಕನಾಳ ನೇತೃತ್ವದ ಕರ್ನಾಟಕ ಸಂಗ್ರಾಮ್ ಸೇನೆ ಬೆಂಬಲ ಸೂಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...