ಧಾರವಾಡ | ಕಲಘಟಗಿ ತಾಲ್ಲೂಕಿಗೆ ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

Date:

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆಯುತ್ತಿರುವ ಮನರೇಗಾ ಕಾಮಗಾರಿ ಸ್ಥಳಕ್ಕೆ ಏಪ್ರಿಲ್ 2ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ ನೀಡಿ ಪರಿವೀಕ್ಷಿಸಿದರು.

- Advertisement -

ಧುಮ್ಮವಾಡ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ನಂತರ ಅವರು ಮಿಶ್ರಿಕೋಟಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಮಿಶ್ರಿಕೋಟಿ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಹಂಚುವುದರ ಮೂಲಕ 2025-2026ನೇ ಸಾಲಿನ ಆರ್ಥಿಕ ವರ್ಷವನ್ನು ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ನಂತರ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಕೂಡಲಗಿ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು. ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಧುಮ್ಮವಾಡ ಗ್ರಾಮ ಪಂಚಾಯತ ಸಭಾಭವನದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿಸಿ, 2024-2025ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅತೀ ಕಡಿಮೆ ಸಾಧನೆ ಮಾಡಿರುವ ಗ್ರಾಮ ಪಂಚಾಯತಿಗಳಾದ ದುಮ್ಮವಾಡ, ಗಳಗಿ, ಜಿ.ಬಸವನಕೊಪ್ಪ, ಕುರುವಿನಕೊಪ್ಪ, ದಾಸ್ತಿಕೊಪ್ಪ ಹಾಗೂ ಸಂಗಮೇಶ್ವರ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವ ಟಿಇಎ ಅವರಿಗೆ ಕಾಲಮೀತಿಯಲ್ಲಿ ಅನುಮೋದಿತ ಕ್ರಿಯಾಯೋಜನೆಯ ಅನುಸಾರ ಕಾಮಗಾರಿಗಳನ್ನು ಕೈಗೊಂಡು ಪೂರ್ಣಪ್ರಮಾಣದ ಗುರಿ ಸಾಧಿಸಬೇಕೆಂದು ಸೂಚಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಗಾಂಜಾ ಮಾರಾಟ: ಹತ್ತು ಜನರ ಬಂಧನ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ‌ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...