ಧಾರವಾಡ | ಭ್ರಷ್ಟಾಚಾರ ಆರೋಪ; ಒಂದೇ ಇಲಾಖೆ ನಾಲ್ವರು ಅಧಿಕಾರಿಗಳ ವರ್ಗಾವಣೆ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಪಾಲಿಕೆ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಪಾಲಿಕೆಯ ನಗರ ಯೋಜನಾ ಘಟಕದ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ. ಪಾಲಿಕೆಯ ಭಾಗ್ಯಶ್ರೀ ಎಮ್.ಎನ್, ಲತಾರಾಣಿ ಜಿಎಮ್ ಬಸವಂತಿ ಪಾಟೀಲ್, ವಿಲಾಸ್, ಮಂಜುಳಾ ನಾಟೇಕರ್ ವರ್ಗಾವಣೆಯಾಗಿರುವ ನಾಲ್ವರು ಅಧಿಕಾರಿಗಳು. ಇವಲ್ಲದೆ, ಇನ್ನೂ ಮೂವರನ್ನು ವರ್ಗಾವಣೆ ಮಾಡಲಾಗಿದೆ.

ನಗರ ಯೋಜನೆ ಘಟಕದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳಿದ್ದವು. ಅಧಿಕಾರಿಗಳ ವಿರುದ್ಧ ಹಲವಾರು ಮಂದಿ ಆಯುಕ್ತರಿಗೆ ದೂರು ನೀಡಿದ್ದರು. ಅಧಿಕಾರಿಗಳಿಗೆ ಆಯುಕ್ತರು ನೋಟಿಸ್‌ ಕೂಡ ಜಾರಿ ಮಾಡಿದ್ದರು. ಆದರೂ, ಅಧಿಕಾರಿಗಳು ತಮ್ಮ ಚಾಳಿಯನ್ನು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯಾವುದೇ ಪ್ರಮಾಣ ಪತ್ರ ಪಡೆಬೇಕೆಂದರೂ ಲಂಚ ಕೊಡಬೇಕಿತ್ತು. ಕಟ್ಟಡ ಪರವಾನಿಗೆ, ಮುಕ್ತಾಯ ಪ್ರಮಾಣ ಪತ್ರ ನೀಡಲು ಹೆಚ್ಚು ಲಂಚ ಪಡೆಯುತ್ತಿದ್ದರು. ಅಲ್ಲದೇ ಕೆಲವರ ಕೈಗೊಂಬೆಯಾಗಿ ಅಧಿಕಾರಿಗಳು ವರ್ತಿಸುತ್ತಿದ್ದರು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕಿ ಆರೋಪ ಮಾಡಿದ್ದರು.

ಆರೋಪಗಳನ್ನು ಗಮನಿಸಿದ್ದ ಆಯುಕ್ತರು ಅಧಿಕಾರಿಗಳಿಗೆ ನೋಟಿಸ್‌ ನೀಡಿ, ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಎಚ್ಚರಿಕೆ ನೀಡಿದ್ದರು. ಆದರೂ, ಅಧಿಕಾರಿಗಳು ಎಚ್ಚೆತ್ತುಕೊಂಡಿರಲಿಲ್ಲ ಎಂದು ತಿಳಿದಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡದ ವಿಚಾರದಲ್ಲಿ ರಾಜಿಯಾಗದೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ...

ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಭೂಮಿ ಪೂಜೆ

ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ...

ಭೂಮಿ ಪರಭಾರೆ | ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯರ ಪಾಲೆಷ್ಟು: ಆರ್‌ ಅಶೋಕ್‌ ಪ್ರಶ್ನೆ

ಸಾರ್ವಜನಿಕ ಜಮೀನನ್ನು ಕಬಳಿಸಿರುವ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲು ಕಂದಾಯ...