ಅವ್ವ ಪ್ರಶಸ್ತಿ | ಎಸ್.ಆರ್.ಪಾಟೀಲ ಸೇರಿ 12 ಸಾಧಕರ ಆಯ್ಕೆ: ಬಸವರಾಜ ಹೊರಟ್ಟಿ

Date:

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ‘ಅವ್ವ ಸೇವಾ ಟ್ರಸ್ಟ್’ ನೀಡುವ ಪ್ರಸ್ತುತ ವರ್ಷದ ‘ಅವ್ವ ಪ್ರಶಸ್ತಿ’ಗೆ ರಾಜಕಾರಣಿ ಎಸ್.ಆರ್.ಪಾಟೀಲ, ಪತ್ರಕರ್ತ ಚಂದ್ರಕಾಂತ ವಡ್ಡು, ಸೀತಾರ ವಾದಕ ಛೋಟೆ ರಹಮತ್‌ಖಾನ್ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಮಂದಿಯನ್ನು ಆಯ್ಕೆ ಮಾಡಲಾಗಿದೆ.

- Advertisement -

‘ಹುಬ್ಬಳ್ಳಿಯ ಗುಜರಾತ ಭವನದಲ್ಲಿ ಡಿಸೆಂಬರ್ 15ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಾಧಕರಿಗೆ ‘ಅವ್ವ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ’ ಎಂದು ಅವ್ವ ಸೇವಾ ಟ್ರಸ್ಟ್ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರು ಸುದ್ದಿಗೋಷ್ಠಿಯಲ್ಲು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಾಹಿತಿ ಸಂಗಮನಾಥ ಲೋಕಾಪುರ, ಗಾಯಕಿ ರೇಖಾ ಹೆಗಡೆ, ಭಾಗವತ ಕೇಶವ ಹೆಗಡೆ ಕೊಳಗಿ, ಉದ್ಯಮಿ ಮಹೇಂದ್ರ ಸಿಂಘಿ, ಬಸವ ತತ್ವ ಪ್ರಚಾರಕ ಎಸ್. ಮಹದೇವಯ್ಯ, ಸಮಾಜ ಸೇವಕಿ ರಾಜೇಶ್ವರಿ ಪಾಟೀಲ, ಜಾನಪದ ಕಲಾವಿದ ಬಸವರಾಜ ಶಿಗ್ಗಾಂವಿ, ಸ್ಟೇಟ್ ಕ್ರೀಡಾಪಟು ತ್ರಿಶಾ ಜಡಲಾ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳಿಸಿದ ಬಾಗಲಕೋಟೆಯ ಅಂಕಿತಾ ಕೊಣ್ಣೂರ ಅವರು ಅವ್ವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಸ್ಮರಣಿಕೆ ಜೊತೆಗೆ ₹25 ಸಾವಿರ ನಗದು ಇರಲಿದೆ” ಎಂದು ಹೇಳಿದರು.

“ಚಿತ್ತರಗಿಯ ವಿಜಯಮಹಾಂತೇಶ್ವರ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉಪನ್ಯಾಸಕಿ ಅಕ್ಷಯಾ ಗೋಖಲೆ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...