ಬಿ-ರಿಪೋರ್ಟ್ ತಿರಸ್ಕೃತ: ಕಾಂಗ್ರೆಸ್‌ ಶಾಸಕ ಕುಲಕರ್ಣಿಗೆ ಧಾರವಾಡ ಪ್ರವೇಶ ಸಾಧ್ಯತೆ ಕ್ಷೀಣ

Date:

ಬಿಜೆಪಿ ಸದಸ್ಯ ಯೋಗೀಶ್‌ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ, ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ.

ಯೋಗೀಶ್‌ಗೌಡರ್ ಕೊಲೆ ಪ್ರಕರಣದ ತನಿಖೆಯನ್ನು ವಿನಯ್ ಕುಲಕರ್ಣಿ ಹಾದಿ ತಪ್ಪಿಸುತ್ತಿದ್ದಾರೆ. ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಹತ್ಯೆಯ ತನಿಖೆಯಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ನಮಗೆ ಬೆದರಿಕೆಯೊಡ್ಡಿದ್ದಾರೆ. ಸರಿಯಾದ ರೀತಿಯಲ್ಲಿ ಪೊಲೀಸರು ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಮೃತ ಯೋಗೀಶ್‌ಗೌಡರ್ ಸಹೋದರ ಗುರುನಾಥಗೌಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ್ದ ಹೈಕೋರ್ಟ್‌, ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸದಂತೆ ನಿರ್ಬಂಧ ಹೇರಿದೆ.

ಇತ್ತೀಚೆಗೆ, ಹುಬ್ಬಳ್ಳಿ-ಧಾರವಾಡ ಪೊಲೀಸರು ಪ್ರಕರಣದ ಬಿ-ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಪೊಲೀಸ್ ವರದಿಯಲ್ಲಿ ಹಲವಾರು ನ್ಯೂನತೆಗಳನ್ನು ಕಂಡುಬಂದಿವೆ ಎಂದಿರುವ ಜನಪ್ರತಿನಿಧಿಗಳ ನ್ಯಾಯಾಲಯವು, ವರದಿಯನ್ನು ತಿರಸ್ಕರಿಸಿದೆ. ಅಲ್ಲದೆ, ಸಂಪೂರ್ಣ ತನಿಖೆಯ ನಂತರ ಅಂತಿಮ ಅಥವಾ ಹೆಚ್ಚುವರಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಸ್ಪರ್ಧಿಸಿದ್ದರು. ಆ ವೇಳೆ, ಪ್ರಚಾರಕ್ಕಾಗಿ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿತ್ತು. ಬಳಿಕ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಲು ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನೂ ಕೋರ್ಟ್‌ ವಜಾಗೊಳಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...