ಜೂನ್ 29 ರಂದು ಬಕ್ರೀದ್ ಆಚರಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ.28ರ ರಾತ್ರಿ 11.59 ರಿಂದ ಜೂ. 30 ರ ಬೆಳಗ್ಗೆ 6 ಗಂಟೆವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಆದೇಶ ಜಾರಿ ಇರುವ ಸಮಯದಲ್ಲಿ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಿರಬೇಕು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆ ಕಾಯ್ದುಕೊಳ್ಳಲು ಅಬಕಾರಿ ಇನ್‌ಸ್ಪೆಕ್ಟರ್, ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21(2) ರನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಧಾರವಾಡ ಜಿಲ್ಲೆಯ ಅಬಕಾರಿ ಇಲಾಖೆಯ ಉಪಆಯುಕ್ತ ಮತ್ತು ಆರಕ್ಷಕ ಅಧೀಕ್ಷಕ ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ಪಟ್ಟಣದೊಳಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ