ಬಿಜೆಪಿ ನಾಯಕರು ನನ್ನ ಹೆಸರು ಹಾಳು ಮಾಡಿದ್ದಾರೆ: ಚೇತನ್ ಹಿರೇಕೆರೂರು

Date:

ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ಬಿಜೆಪಿ ನಾಯಕರು ನನ್ನ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಮಾಡದ ತಪ್ಪಿಗೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಪೊಲೀಸರನ್ನು ಬಳಸಿಕೊಂಡು ರಾಜಕೀಯವಾಗಿ ನನ್ನನ್ನು ಮುಗಿಸಲು ಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

‘‘ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುವುದನ್ನು ತಡೆಯಲು ಚೇತನ್ ಅವರನ್ನು ಬಂಧಿಸಲಾಗಿತ್ತು” ಎಂದು ದಲಿತ ಸಂಘಟನೆಗಳ ಮುಖಂಡ ಗುರುನಾಥ ಉಳ್ಳಿಕಾಶಿ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚೇತನ್ ವಿರುದ್ಧದ ಎಲ್ಲ ಪ್ರಕರಣಗಳ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು, ಫಿರ್ಯಾದಿದಾರರು ಹಾಗೂ ತನಿಖಾಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...