ಧಾರವಾಡ | ಶ್ರಮದಿಂದ ವ್ಯಕ್ತಿತ್ವ ವಿಕಾಸ: ಡಾ. ಎಂ. ಬಿ. ದಳಪತಿ

Date:

“ನವೆಂಬರ್ – 04 ನಿರಂತರ ಕಠಿಣ ಶ್ರಮ ಮತ್ತು ಪ್ರಯತ್ನಗಳು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಿ ವ್ಯಕ್ತಿತ್ವ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ” ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮ ಸಂಯೋಜಕರು ಮತ್ತು ಕರ್ನಾಟಕ ಕಲಾ ಮಹಾವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎಂ. ಬಿ. ದಳಪತಿ ಅವರು ಹೇಳಿದರು.

- Advertisement -

ಧಾರವಾಡ ಪಟ್ಟಣದ ಅಂಜುಮನ್ ಪದವಿ ಮಹಾವಿದ್ಯಾಲಯದ 2026-27ನೇ ಸಾಲಿನ ಶೈಕ್ಷಣಿಕ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

“ಕಾಲೇಜು ಜೀವನವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಲ್ಲ, ಉತ್ತಮ ವ್ಯಕ್ತಿತ್ವ, ಶಿಸ್ತು, ಸಂವಹನ ಕೌಶಲ್ಯ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಹಂತ. ಪಾಠದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಾಗ ಮಾತ್ರ ಕ್ರಿಯಾಶೀಲ ವಿದ್ಯಾರ್ಥಿಗಳಾಗಲು ಸಾಧ್ಯ” ಎಂದರು.

“ಶಿಕ್ಷಣ ಕ್ಷೇತದ್ರಲ್ಲಿ ಅಂಜುಮನ್ ಸಂಸ್ಥೆ ಮಿನಿ ವಿಶ್ವವಿದ್ಯಾಲಯದಂತೆ ಸೇವೆ ಸಲ್ಲಿಸುತ್ತಿದೆ. ಡಾ. ಎಮ್.ಬಿ ದಿಲ್‌ಶಾದ್ ಅವರು ಎನ್‌ಎಸ್‌ಎಸ್ ಘಟಕಕ್ಕೆ ಅಮೂಲ್ಯ ಕೊಡುಗೆ ನೀಡುವುದರ ಜೊತೆಗೆ ಅಂಜುಮನ್ ಶಿಕ್ಷಣ ಸಂಸ್ಥೆಗೆ ಶ್ರಮಿಸಿದ್ದಾರೆ” ಎಂದರು.

ಕಾಲೇಜಿನ ಜಮಖಾನ ಹಾಗೂ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಅಲ್ಹಾಜ್ ಬಸೀರ್ ಅಹಮದ್ ಜಾಹಗೀದಾರ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಸುಮಯ್ಯ ಮಲ್ಲೂರು ಪವಿತ್ರ ಕುರಾನ್ ಪಠಣ ಮಾಡಿದರು. ಕುಮಾರಿ ಮುಸ್ಕಾನ್ ದಫೇದಾರ್ ಶ್ಲೋಕ ಪಠಿಸಿದರು. ಕುಮಾರಿ ಫಾತಿಮಾ ಚಪ್ಪರಮನಿ  ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಕಾಲೇಜು ಡಿಬೇಟಿಂಗ್ ಅಧ್ಯಕ್ಷ ಡಾ. ಮೇಟಿ ರುದ್ರೇಶ್ ಗಣ್ಯರಿಗೆ ಗೌರವಿಸಿದರು. ಅತಿಥಿಗಳ ಸಮ್ಮುಖದಲ್ಲಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಂಜುಮನ್ ಶಿಕ್ಷಣ ಮಂಡಳಿಯ ಸದಸ್ಯರಾದ ಡಾ. ಸಯ್ಯದ್ ಖದೀರ್ ಎ. ಸರ್ಗಿರೋ, ಜನಾಬ್ ಮೊಹಮ್ಮದ್ ಶಫಿ ಕಳ್ಳಿಮನಿ, ಅಲ್ಹಾಜ್ ಮಹಮ್ಮದ್ ರಫೀಕ್ ಸಿ. ಶಿರಹಟ್ಟಿ, ಅದ್ಬುಲ್ ಅಜೀಜ್ ಬಡಬಡೆ, ಖೈರುದ್ದೀನ್ ಶೇಕ್, ರಿಯಾಜ್ ಅಹ್ಮದ್  ನನ್ನೆಸಾಬನ್ನವರ, ಡಾ. ಎನ್. ಎಮ್. ಮಕಾಂದರ ಯಾಸೀನ್ ಅಲಿ ಹಾವೇರಿಪೇಟೆ ವೇದಿಕೆ ಮೆಲಿದ್ದರು.

ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕಿ ಡಾ. ಆಸ್ಮನಾಜ್ ಬಳ್ಳಾರಿ,  ಡಾ. ಎಸ್‌.ಕೆ ಜಾಧವ್, ಪ್ರೊ. ನಾಗರಾಜ ಕನಕನೆ, ಪ್ರೊ. ಮುಬಾರಕ ಮುಲ್ಲಾ, ಪ್ರೊ. ಉಲ್ಲಾಸ ದೊಡಮನಿ ಸೇರಿದಂತೆ ಮಹಾವಿದ್ಯಾಲಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಬಿ. ನಲತವಾಡ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕಿ ಡಾ. ಸಯ್ಯದ್ ತಾಜುನೀಸಾ ಅತಿಥಿಗಳ ಪರಿಚಯಿಸಿದರು. ಡಾ. ಅಸ್ಮಾ ಅಂಜುಮ್ ನದಾಫ್ ನಿರೂಪಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಎಸ್. ಎಸ್. ಅದೂನಿ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಾಲ್ಕು ತಿಂಗಳಿಂದ ವೇತನವಿಲ್ಲದೆ ಅತಿಥಿ ಶಿಕ್ಷಕರ ಪರದಾಟ; ಕುಟುಂಬ ನಿರ್ವಹಣೆ ದುಸ್ತರ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಎಲ್‌ಕೆಜಿ,...

ಕಲಬುರಗಿ | ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯ, ಪಾರದರ್ಶಕ ತನಿಖೆ ಹಾಗೂ...

ಉಡುಪಿ | ಕುಮ್ಕಿ, ಗೇರು ಲೀಸ್ ಭೂಮಿಗೆ ಹಕ್ಕುಪತ್ರ ನೀಡಿ; ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಿ

ಪಶ್ಚಿಮ ಘಟ್ಟ ಹಾಗೂ ಕರಾವಳಿ ಭಾಗದ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ....