ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

Date:

“ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಚುನಾವಣಾಧಿಕಾರಿಗಳು ಆಗಿರುವ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಅವರು ಸೂಚಿಸಿದರು.

- Advertisement -

ಧಾರವಾಡ ನಗರದ ಕರ್ನಾಟಕ ಆಲೂರು ವೆಂಕಟರಾವ್ ಭವನದಲ್ಲಿ ಸೂಕ್ಷ್ಮ ವೀಕ್ಷಕರು, ಪಿಆರ್‍ಓ, ಎಪಿಆರ್‍ಓ ಅವರಿಗೆ ಆಯೋಜಿಸಿದ ಚುನಾವಣೆಯ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಚುನಾವಣೆಯಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿದ್ದು, ಮತಪತ್ರಗಳ ವಿತರಣೆ ಮತ್ತು ನಿರ್ವಹಣೆಯಲ್ಲಿ ವಿಶೇಷ ಜಾಗರೂಕತೆ ವಹಿಸಬೇಕು. ಮತಪತ್ರಗಳಿಗೆ ಯಾವುದೇ ಕಲೆ ಅಥವಾ ಗುರುತು ತಗಲದಂತೆ ನೋಡಿಕೊಳ್ಳಬೇಕು” ಎಂದು ಅವರು ತಿಳಿಸಿದರು.

“ಮತದಾನದ ಗೌಪ್ಯತೆಯನ್ನು ಕಾಪಾಡುವುದರ ಜೊತೆಗೆ ಮತದಾರರು ಮತಪತ್ರವನ್ನು ಸರಿಯಾಗಿ ಮಡಚಿ ಮತಪೆಟ್ಟಿಗೆಯಲ್ಲಿ ಹಾಕುವಂತೆ ಸಿಬ್ಬಂದಿ ಗಮನ ಹರಿಸಬೇಕು. ಮತದಾನವು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಸಿಬ್ಬಂದಿ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಜಿಲ್ಲಾಡಳಿತದಿಂದ ನೇಮಕಗೊಂಡಿರುವ ಮಾಸ್ಟರ್ ಟ್ರೈನರ್‍ಗಳಾದ ರಾಘವೇಂದ್ರ ಬಡಿಗೇರ, ಭರತಕುಮಾರ ಚಂದನಕರ್, ಅರುಣ ನವಲೂರ, ಸೋಮು ಸಂತಿ, ನರಸಿಂಹಮೂರ್ತಿ ರಾಜೂರು ಅವರು ಚುನಾವಣೆ ಸಿಬ್ಬಂದಿಗಳಿಗೆ ಎರಡನೇ ಹಂತದ ತರಬೇತಿ ನೀಡಿದರು.  

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಧಾರವಾಡ ತಹಶೀಲ್ದಾರ್ ಡಾ. ಡಿ.ಎಚ್.ಹೂಗಾರ, ಡಿಡಿಪಿಐ ಉಮೇಶ ಬೊಮ್ಮಕ್ಕನವರ, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳಾದ ಪ್ರಭಾಕರ ಭಟ್, ಪ್ರವೀಣ ಹುಚ್ಚಣ್ಣನವರ, ರಾಜಶೇಖರಗೌಡ ಕಂಟೆಪ್ಪಗೌಡರ, ಮಲ್ಲಿಕಾರ್ಜುನ ಸೊಲಗಿ, ರಮೇಶ ಪಾಯಣ್ಣವರ, ಪ್ರಜ್ವಲ್ ದೊಡ್ಡಮನಿ, ಸುನೀಲ ಸಾಲಗಟ್ಟಿ, ಮೋಹನ ಅಂಬಿಗೇರ, ಆಶಾಲತಾ ಹುಬ್ಬಳ್ಳಿ, ಸವಿತಾ ಬಳಗಾನೂರ, ಯಲ್ಲಪ್ಪ ಸವದತ್ತಿ ಸೇರಿದಂತೆ ತರಬೇತುದಾರರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...