ಧಾರವಾಡ | ಎತ್ತಿನಗುಡ್ಡದಲ್ಲಿ ಸಿದ್ದರಾಮೇಶ್ವರರ 852ನೇ ಜಯಂತಿ ಆಚರಣೆ

Date:

12ನೇ ಶತಮಾನದಲ್ಲಿ ಜೀವಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರವಾದದ್ದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಮಹಾಪೌರ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಹೇಳಿದರು.

ಧಾರವಾಡ ಜಿಲ್ಲೆಯ ಎತ್ತಿನಗುಡ್ಡದ ಗ್ರಾಮದಲ್ಲಿ ನಡೆದ ಸಿದ್ದರಾಮೇಶ್ವರರ 852ನೇ ಜಯಂತಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಬಸವಣ್ಣ, ಅಲ್ಲಮಪ್ರಭು, ಮಾದರ ಚನ್ನಯ್ಯ, ಚನ್ನಬಸವಣ್ಣ, ಅಕ್ಕಮಹಾದೇವಿ, ಸಿದ್ದರಾಮೇಶ್ವರರು ಹಾಗೂ ಇನ್ನೂ ಅನೇಕ ಶಿವಶರಣೆಯರ ಆದರ್ಶಗಳು ನಮಗೆಲ್ಲ ದಾರಿದೀಪವಾಗಲಿ” ಎಂದು ಆಶಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶಿವಯೋಗಿ ಸಿದ್ದರಾಮೇಶ್ವರರು ವೇಷ ಧರಿಸಿ ಫಲವೇನಯ್ಯ, ವೇಷದಂತೆ ಆಚರಣೆ ಇಲ್ಲದಿದ್ದಾಗ ಎನ್ನುವ ವಚನ ಸಾರಿ ಹೇಳಿದ 12ನೇ ಶತಮಾನದ ಖ್ಯಾತ ಶಿವಶರಣರು ಮತ್ತು ವಚನಕಾರರಾಗಿದ್ದರು” ಎಂದರು.

“ಬಸವತತ್ವ ವೈಚಾರಿಕ ಚಿಂತನೆಯಲ್ಲಿ ಅರಳಿದ ಅವರು, ಉಪದೇಶಿಸಿರುವ ಜ್ಞಾನ ಸಂದೇಶಗಳನ್ನು ಅವಲೋಕನ ಮಾಡಿಕೊಳ್ಳುವುದರ ಮೂಲಕ ಅವುಗಳನ್ನು ತನುಮನಗಳಲ್ಲಿ ಕ್ರಿಯಾತ್ಮಕವಾಗಿ ರೂಪಿಸಿಕೊಳ್ಳುವ ಪ್ರಯತ್ನದೊಂದಿಗೆ ಅವರಿಗೆ ಸಲ್ಲಿಸುವ ನಮನ ನಿಜಕ್ಕೂ ಅರ್ಥಪೂರ್ಣ ಎನಿಸುತ್ತದೆ. ಭೋವಿ ಸಮಾಜಕ್ಕೆ ಸಿದ್ದರಾಮೇಶ್ವರರ ಕೊಡುಗೆ ಅಪಾರವಾಗಿದೆ” ಎಂದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವಕ್ರಾಂತಿ ರಾಜ್ಯ ಉಪಾಧ್ಯಕ್ಷ ಮಂಜುನಾಥ ಹಿರೇಮನಿ ಹಾಗೂ ಖ್ಯಾತ ಕುಸ್ತಿಪಟು ಬಸವರಾಜ ವಡ್ಡರ ಅವರನ್ನು ಸನ್ಮಾನಿಸಿದರು. ಅನ್ನ ಸಂತರ್ಪಣೆ ಜರುಗಿತು. ನಂತರ ಮಕ್ಕಳಿಂದ ಹಾಗೂ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ಸುದ್ದಿ ಓದಿದ್ದೀರಾ? ಮೈಸೂರು | ಫ್ಲೆಕ್ಸ್ ಅಳವಡಿಕೆಗೆ ನಿಷೇಧ; ಆದೇಶ ಉಲ್ಲಂಘನೆ ಆರೋಪ

ಶ್ರೀ ಸಿದ್ದರಾಮೇಶ್ವರ ಭೋವಿ ವಡ್ಡರ ಸಂಘದ ಅಧ್ಯಕ್ಷ ಬಸವರಾಜ ರುದ್ರಾಪುರ, ಮಾಜಿ ಪಾಲಿಕೆ ಸದಸ್ಯ ವೀರನಗೌಡ ಪಾಟೀಲ, ಮಂಜುನಾಥ ಭೋವಿ, ಶ್ರೀನಿವಾಸ ಉಣಕಲ್, ಸುನೀಲ ಮೋರೆ, ಮಂಜುನಾಥ ಕಮ್ಮಾರ, ಮಂಜುನಾಥ ಹಳಿಯಾಳ, ರಾಜು ರುದ್ರಪುರ, ಬಸಪ್ಪ ರುದ್ರಪುರ, ಬಸವರಾಜ ಆನೆಗುಂದಿ, ಸಂತೋಷ ರುದ್ರಾಪುರ, ರಾಮಣ್ಣ ರುದ್ರಾಪುತ, ತಿಮ್ಮಣ್ಣ ಬಂಡಿವಡ್ಡರ, ಹನುಮಂತ ಬಂಡಿವಡ್ಡರ, ರಾಜೇಶ್ವರಿ ರುದ್ರಾಪುರ, ಲಕ್ಷ್ಮೀ ಬಂಡಿವಡ್ಡರ, ತಿಮ್ಮವ್ವ ಬಂಡಿವಡ್ಡರ, ರಾಜೇಶ್ವರಿ ಮುತ್ತೂರು, ಹುಲುಗವ್ವ ಬಂಡಿವಡ್ಡರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...