ಧಾರವಾಡ | ಮತದಾನದ ಹಕ್ಕು, ಸಂವಿಧಾನದ ರಕ್ಷಣೆಗೆ ಜನಾಂದೋಲನ ಅನಿವಾರ್ಯ: ಧಾರವಾಡದಲ್ಲಿ ಮೇಣದಬತ್ತಿ ಪ್ರತಿಭಟನೆ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಅದರಿಂದ ಅರ್ಹ ಮತದಾರರ ಹಕ್ಕುಗಳಿಗೆ ಉಂಟಾಗಬಹುದಾದ ಆತಂಕಗಳ ವಿರುದ್ಧ ಧಾರವಾಡದಲ್ಲಿ ಜನಪರ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ಪ್ರಜಾಸತ್ತಾತ್ಮಕ ಹೋರಾಟಗಾರರು ಧಾರವಾಡ ನಗರದ ಕ ಡಾ ಪಾ ಮೈದಾನ ಎದುರು ಅಂಬೇಡ್ಕರ್ ಮೂರ್ತಿ ಕೆಳಗಡೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

- Advertisement -

ಕರ್ನಾಟಕ SIR ವಿರೋಧಿ ಜನಪರ ಸಂಘಟನೆಗಳು’ ಮತ್ತು ‘ಎದ್ದೇಳು ಕರ್ನಾಟಕ’ ಸೇರಿದಂತೆ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮಹಿಳೆಯರು ಹಾಗೂ ಚರ್ಚ್‌ನ ಸನ್ಯಾಸಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಇಸಬೆಲಾ ಝೇವಿಯರ್, “ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟವು ಕೇವಲ ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆಯುವುದಕ್ಕೆ ಸೀಮಿತವಾಗಿರಲಿಲ್ಲ. ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವ ಘನತೆಯನ್ನು ಆಧರಿಸಿದ ಸಮಾಜ ನಿರ್ಮಿಸುವುದೂ ಅದರ ಆಶಯವಾಗಿತ್ತು. ಈ ಮೌಲ್ಯಗಳಿಗೆ ಧಕ್ಕೆ ಎದುರಾದಾಗ ಜನರು ಮತ್ತೊಮ್ಮೆ ಒಗ್ಗೂಡಿ ಹೋರಾಡಬೇಕಾಗುತ್ತದೆ” ಎಂದು ಕರೆ ನೀಡಿದರು.

“ಪ್ರತಿಭಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ. ವಿಶೇಷವಾಗಿ ಚರ್ಚ್‌ನ ಸನ್ಯಾಸಿನಿಯರು ಮೇಣದಬತ್ತಿ ಹಿಡಿದು ಪ್ರಜಾಪ್ರಭುತ್ವದ ಪರವಾಗಿ ಧ್ವನಿ ಎತ್ತಿರುವುದು ಮಹತ್ವದ್ದಾಗಿದೆ. ಧಾರ್ಮಿಕ ಸೇವೆ ಮತ್ತು ಸಮಾಜಸೇವೆಯಲ್ಲಿ ತೊಡಗಿರುವವರು ಸಾಮಾಜಿಕ ನ್ಯಾಯದ ವಿಚಾರದಲ್ಲಿಯೂ ಕಾಳಜಿ ವ್ಯಕ್ತಪಡಿಸಿರುವುದು ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ, “ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟರು. ಈ ಬೇಡಿಕೆಗಳು ಈಡೇರುವವರೆಗೆ ಹೋರಾಟವನ್ನು ಸ್ಥಗಿತಗೊಳಿಸದೆ ಮುಂದುವರಿಸಬೇಕು. ಈ ಹಿಂದೆ NRC–CAA ವಿರೋಧಿ ಹೋರಾಟದ ಮಾದರಿಯಲ್ಲಿ ದೇಶಾದ್ಯಂತ ನಿರಂತರ ಪ್ರಜಾಸತ್ತಾತ್ಮಕ ಜನಾಂದೋಲನವನ್ನು ರೂಪಿಸುವ ಅಗತ್ಯವಿದೆ” ಎಂದು ಕರೆ ನೀಡಿದರು.

“SIR ಪ್ರಕ್ರಿಯೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಜನರ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಹೋರಾಟವನ್ನು ಬಲಪಡಿಸಬೇಕು” ಎಂದು ಅವರು ಪ್ರತಿಪಾದಿಸಿದರು.

ಸಾಹಿತಿ ಬಸವರಾಜ ಸೂಳೆಭಾವಿ ಮಾತನಾಡಿ, “ದೆಹಲಿಯಲ್ಲಿ ಯುವಜನರು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ನಡೆಸಿದ ಹೋರಾಟವನ್ನು ಉಲ್ಲೇಖಿಸಿದರು. 56 ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ಮುಚ್ಚಿದರೂ ಯುವಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ ಎಂಬ ವಿಚಾರವನ್ನು ಪ್ರಸ್ತಾಪಿಸಿ, ನಿರ್ಬಂಧಗಳಿಂದ ಯುವಜನರ ಸಂಕಲ್ಪವನ್ನು ಕುಗ್ಗಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎದ್ದೇಳು ಕರ್ನಾಟಕದ ಮುಸ್ತಾಕ್, ಹಾವೇರಪೇಟೆ, ನ್ಯಾಯವಾದಿ ವಿಶ್ವನಾಥ ಬಿಚಗತ್ತಿ, ಅಸ್ಮಾ ಖಾಜಿ, ಬಿ.ಐ. ಇಳಗೆರ, ನಂದಾ ಗುಳೇದಗುಡ್ಡ, ಪ್ರಭು ಹಂಚಿನಾಳ, ಲಕ್ಷ್ಮಣ ಬಕ್ಕಾಯಿ, ಸಲೀಮವುಲ್ಲಾ, ಸುಭದ್ರಾ, ಚಿತ್ರಾ ಹಾಗೂ ಸಮರಸ ವೇದಿಕೆಯ ಸಿಸ್ಟರ್ ಆಸ್ಸುಂಪ್ಟಾಬಿ. ಎಸ್. ಸೇರಿದಂತೆ ಹಲವರು ಭಾಗವಹಿಸಿದ್ದರು. ಜಮಾಅತೆ ಇಸ್ಲಾಮಿ ಹಿಂದ್, ಕಾಂಗ್ರೆಸ್, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಪೊಲೀಸರ ಮಾನವೀಯತೆ:112 ವಾಹನದಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಸಮೀಪ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸ್ವಯಂ ಅಪಘಾತ...

ಕುಮಟಾ | ಹೊಳೆಗದ್ದೆ ಟೋಲ್ ಬಳಿ ಅಲ್ಫಾ ವೈನ್ ಶಾಪ್‌ನಲ್ಲಿ ಕಳ್ಳತನ; 2.39 ಲಕ್ಷ ರೂ. ನಗದು ದರೋಡೆ

ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್‌ನ ಶೆಟರ್...

ಉಡುಪಿ | ಮೂಲ ನಿವಾಸಿಗಳ ಮತದಾನದ ಹಕ್ಕು ಕಿತ್ತುಕೊಳ್ಳುವ ಸಂಚು: ಜ್ಞಾನಪ್ರಕಾಶ ಸ್ವಾಮೀಜಿ ಆರೋಪ

ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ...

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...