ಧಾರವಾಡ | ಖಾಲಿ ಹುದ್ದೆ ಭರ್ತಿ ಪ್ರತಿಭಟಿಸುತ್ತಿದ್ದ ಆಕ್ಸಾ ಮುಖ್ಯಸ್ಥ ಕಾಂತಕುಮಾರ್ ಪೋಲಿಸರ ವಶ

Date:

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಿ, ಆಕ್ಸಾ (AKKSA) ಸಂಘಟನೆಯ ಮುಖಂಡ ಕಾಂತಕುಮಾರ್ ಅವರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

- Advertisement -

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗಾಂಧಿ ಪ್ರತಿಮೆ ಅಕ್ಸಾ ಸಂಘಟನೆ ಮುಖಂಡ ಕಾಂತಕುಮಾರ್ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, “ನಿಮಗೆ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಕೇವಲ 100 ಜನರಿಗೆ ಮಾತ್ರ ಪ್ರತಿಭಟನೆ ನಡೆಸಲು ಹೈಕೋರ್ಟ್ ಅವಕಾಶ ನೀಡಿದೆ. ಆದರೆ, ನೀವು ಇಲ್ಲಿ ಪ್ರತಿಭಟನೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. ಕೂಡಲೇ ಪ್ರತಿಭಟನೆ ಕೈಬಿಡಿ” ಎಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಕಾಂತಕುಮಾರ್ ಅವರು, “ನಾನು ಪ್ರತಿಭಟನೆ ಕೈಬಿಡುವುದಿಲ್ಲ, ಬೇಕಿದ್ದರೆ ನನ್ನನ್ನು ಬಂಧಿಸಿ” ಎಂದು ಪಟ್ಟು ಹಿಡಿದರು. 

ಇದರಿಂದ ಪೊಲೀಸರು ಮತ್ತು ಕಾಂತಕುಮಾರ್ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೊನೆಗೆ ಪೊಲೀಸರು ಬಲವಂತವಾಗಿ ಕಾಂತಕುಮಾರ್ ಅವರನ್ನು ಬಂಧಿಸಿ ಕರೆದೊಯ್ದರು. ನಾಲ್ಕೈದು ಜನ ಪೊಲೀಸರು ಸೇರಿ ಅವರನ್ನು ಒತ್ತಾಯಪೂರ್ವಕವಾಗಿ ಕರೆದೊಯ್ಯುವ ವೇಳೆ ತಳ್ಳಾಟ-ನೂಕಾಟ ನಡೆಯಿತು. 

“ನಾನು ನಮ್ಮ ಹಕ್ಕನ್ನು ಕೇಳುತ್ತಿದ್ದೇನೆ. ನಮ್ಮ ಸಂವಿಧಾನಾತ್ಮಕ ಹಕ್ಕನ್ನು ಕಸಿದುಕೊಳ್ಳಬೇಡಿ. ಮೊದಲು ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸರ್ಕಾರಕ್ಕೆ ತಿಳಿಸಿ” ಎಂದು ಕಾಂತಕುಮಾರ್ ಪೊಲೀಸರ ಮುಂದೆ ತಮ್ಮ ಬೇಡಿಕೆಗಳನ್ನು ಇಟ್ಟರು. ಆದರೆ ಪೊಲೀಸರು ಯಾವುದಕ್ಕೂ ಕಿವಿಗೊಡದೆ, ಅವರನ್ನು ವಾಹನದಲ್ಲಿ ಕರೆದೊಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...