ಆರು ಸಾವಿರ ಮಂದಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳು ಧಾರವಾಡದಲ್ಲಿ ಪತ್ರ ಚಳುವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.
ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿ ಅಸ್ಲಾಮ್ ವಾಲಿಕಾರ ಮಾತನಾಡಿ, “ಹೊಸ ಸರ್ಕಾರ ಕಳೆದ ಆರು ತಿಂಗಳಿನಿಂದ ಹಲವಾರು ಯೋಜನೆಗಳ ಮುಖಾಂತರ ರಾಜ್ಯದ ಜನತೆಗೆ ಹಲವಾರು ಆಶೋತ್ತರಗಳನ್ನು ಈಡೇರಿಸಿದ್ದು, ಪ್ರಸ್ತುತ ಅವಧಿಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಲ್ಲಿ 6000ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು, ಉನ್ನತ ಶಿಕ್ಷಣ ಸಚಿವರು ಇತ್ತಿಚೀನ ಪತ್ರಿಕಾಘೋಷ್ಟಿ ಮತ್ತು ಉನ್ನತ ಶಿಕ್ಷಣ ಇಲಾಖೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ಆದಷ್ಟು ಬೇಗ ನೇಮಕಾತಿ ಮಾಡಿಕೊಳ್ಳುವುದರಿಂದ ನಮಗೆ ಉದ್ಯೋಗ ದೊರಕಿದಂತಾಗುತ್ತದೆ” ಎಂದು ಮನವಿ ಮಾಡಿದ್ದಾರೆ.
“ಕೆಲವು ಅಭ್ಯರ್ಥಿಗಳು ಎಲ್ಲ ರೀತಿಯ ಅರ್ಹತೆ ಹೊಂದಿದ್ದರೂ ಕೂಡ ಅತಿಥಿ ಉಪನ್ಯಾಸಕರ ಹುದ್ದೆಯೂ ಸಿಗದಂತಾಗಿದೆ. ಯುಜಿಸಿ ಆರ್ಹತೆ ಹೊಂದಿರುವ 30,000ಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದೇವೆ. ಹಾಗಾಗಿ ಶೀಘ್ರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅರ್ಹ ಅಭ್ಯರ್ಥಿಗಳು ಅನಿವಾರ್ಯವಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಇದು ರಾಜ್ಯದ ಉನ್ನತ ಶಿಕ್ಷಣ ಮತ್ತು ನಾಡಿನ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು” ಎಂದು ವಿನಂತಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹಾಲಿನ ದರ ಇಳಿಕೆ; ಜ.9ರಂದು ಶಿಮುಲ್ ವಿರುದ್ಧ ಪ್ರತಿಭಟನೆ
ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಶಂಭು, ಅಕ್ಷಯ್, ಸಿದ್ದು, ಮಂಜು, ರಾಜೇಶ್ ಸೇರಿದಂತೆ ಇತರರು ಇದ್ದರು.