ಧಾರವಾಡ | ಸಹಾಯಕ ಪ್ರಾಧ್ಯಾಪಕ ಹುದ್ದೆ; ಆರು ಸಾವಿರ ಮಂದಿ ನೇಮಕಕ್ಕೆ ಅಭ್ಯರ್ಥಿಗಳ ಆಗ್ರಹ

Date:

ಆರು ಸಾವಿರ ಮಂದಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳು ಧಾರವಾಡದಲ್ಲಿ ಪತ್ರ ಚಳುವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.

- Advertisement -

ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿ ಅಸ್ಲಾಮ್ ವಾಲಿಕಾರ ಮಾತನಾಡಿ, “ಹೊಸ ಸರ್ಕಾರ ಕಳೆದ ಆರು ತಿಂಗಳಿನಿಂದ ಹಲವಾರು ಯೋಜನೆಗಳ ಮುಖಾಂತರ ರಾಜ್ಯದ ಜನತೆಗೆ ಹಲವಾರು ಆಶೋತ್ತರಗಳನ್ನು ಈಡೇರಿಸಿದ್ದು, ಪ್ರಸ್ತುತ ಅವಧಿಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಲ್ಲಿ 6000ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು, ಉನ್ನತ ಶಿಕ್ಷಣ ಸಚಿವರು ಇತ್ತಿಚೀನ ಪತ್ರಿಕಾಘೋಷ್ಟಿ ಮತ್ತು ಉನ್ನತ ಶಿಕ್ಷಣ ಇಲಾಖೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ಆದಷ್ಟು ಬೇಗ ನೇಮಕಾತಿ ಮಾಡಿಕೊಳ್ಳುವುದರಿಂದ ನಮಗೆ ಉದ್ಯೋಗ ದೊರಕಿದಂತಾಗುತ್ತದೆ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕೆಲವು ಅಭ್ಯರ್ಥಿಗಳು ಎಲ್ಲ ರೀತಿಯ ಅರ್ಹತೆ ಹೊಂದಿದ್ದರೂ ಕೂಡ ಅತಿಥಿ ಉಪನ್ಯಾಸಕರ ಹುದ್ದೆಯೂ ಸಿಗದಂತಾಗಿದೆ. ಯುಜಿಸಿ ಆರ್ಹತೆ ಹೊಂದಿರುವ 30,000ಕ್ಕೂ ಅಧಿಕ ಮಂದಿ  ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದೇವೆ. ಹಾಗಾಗಿ ಶೀಘ್ರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅರ್ಹ ಅಭ್ಯರ್ಥಿಗಳು ಅನಿವಾರ್ಯವಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಇದು ರಾಜ್ಯದ ಉನ್ನತ ಶಿಕ್ಷಣ ಮತ್ತು ನಾಡಿನ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು” ಎಂದು ವಿನಂತಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹಾಲಿನ ದರ ಇಳಿಕೆ; ಜ.9ರಂದು ಶಿಮುಲ್ ವಿರುದ್ಧ ಪ್ರತಿಭಟನೆ

ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಶಂಭು, ಅಕ್ಷಯ್, ಸಿದ್ದು, ಮಂಜು, ರಾಜೇಶ್ ಸೇರಿದಂತೆ ಇತರರು ಇದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...