ಕನ್ನಡ ಸಾಹಿತ್ಯ ಲೋಕಕ್ಕೆ ಅನುಪಮ ಸೇವೆ ಸಲ್ಲಿಸಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಎಂ. ಕಲಬುರ್ಗಿ ಅವರ 11ನೇ ಹುತಾತ್ಮ ದಿನಾಚರಣೆಯನ್ನು ಆಗಸ್ಟ್ 30, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಕರ್ನಾಟಕ ಕುಲಪುರೋಹಿರ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಡಾ. ಎಂ.ಎಂ. ಕಲಬುರ್ಗಿ ಅವರ 11ನೇ ಹುತಾತ್ಮ ದಿನಾಚರಣೆಯನ್ನು ಕರ್ನಾಟಕ ಸರ್ಕಾರದ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದು, ‘ವಿಶೇಷ ಉಪನ್ಯಾಸ, ಗ್ರಂಥ ಬಿಡುಗಡೆ, ವಚನ ಸಂಗೀತ ಹಾಗೂ ಆನ್‍ಲೈನ್ ಸರಣಿ ಉಪನ್ಯಾಸ ಉದ್ಘಾಟನೆ ಕಾರ್ಯಕ್ರಮವನ್ನು ನಡೆಯಲಿವೆ.
ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಆಲೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪ್ರತಿಷ್ಠಾನದಿಂದ ಪ್ರಕಟಗೊಂಡ ‘ಕನ್ನಡ ಸಂಶೋಧನ ಮಾರ್ಗ ಸಂಪುಟ-2’ ಗ್ರಂಥವನ್ನು ಹಿರಿಯ ವಿದ್ವಾಂಸರಾದ ಡಾ. ಶಾಂತಿನಾಥ ದಿಬ್ಬದ ಅವರು ಬಿಡುಗಡೆ ಮಾಡುವರು. ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೀರಣ್ಣ ರಾಜೂರ ಅವರು ಅಧ್ಯಕ್ಷತೆಯನ್ನು ಹಾಗೂ ಉಮಾದೇವಿ ಎಂ. ಕಲಬುರ್ಗಿ ಅವರು ಉಪಸ್ಥಿತಿಯನ್ನು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಪ್ರಾರಂಭದಲ್ಲಿ ಡಾ. ಅರ್ಜುನ ವಠಾರ ಅವರು ವಚನ ಸಂಗೀತವನ್ನು ಪ್ರಸ್ತುತಪಡಿಸುವರು.
ಈ ಕಾರ್ಯಕ್ರಮಕ್ಕೆ ಸಂಶೋಧಕರು, ಸಾಹಿತಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




