ಧಾರವಾಡ | ಬಿಟೆಕ್, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ಕೃಷಿ ಅಧಿಕಾರಿ ಹುದ್ದೆಗೆ ಖಂಡನೆ: ಮುಂದುವರೆದ ಪ್ರತಿಭಟನೆ

Date:

ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್‌ಸಿ ಹಾಗೂ ಬಿಟೆಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

- Advertisement -

ಧಾರವಾಡ-ಬೆಳಗಾವಿ ಮಾರ್ಗದಲ್ಲಿರುವ ಕೃಷಿ ವಿವಿ ಮುಂಭಾಗದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರ ಮತ್ತು ಕೃಷಿ ಇಲಾಖೆಯ ಮುಖ್ಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಕೆಇಎಯಿಂದ ಅಧಿಸೂಚನೆ ಹೊರಡಿಸಿರುವ 945 ಕೃಷಿ ಅಧಿಕಾರಿ ಹುದ್ದೆ, ಬಿಎಸ್‌ಸಿ, ಬಿಟೆಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸರ್ಕಾರದ ಈ ನಿರ್ಧಾರ ವಿರೋಧಿಸಿ ಕಳೆದ 13 ದಿನಗಳಿಂದ ಹೋರಾಟ ಮಾಡಲಾಗುತ್ತಿದ್ದರೂ ಅಧಿಕಾರಿಗಳು ಮತ್ತು ಸರ್ಕಾರ ಸ್ಪಂದನೆ ನೀಡಲಿಲ್ಲ. ಈ ಹಿನ್ನಲೆಯಲ್ಲಿ, ಇಂದಿನ ಪ್ರತಿಭಟನೆ ವಿಶ್ವ ವಿದ್ಯಾಲಯದ ಪ್ರವೇಶ ದ್ವಾರಕ್ಕೆ ಬಂದಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ‘ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿ’: ಸಿ ಟಿ ರವಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

ಕೃಷಿ ವಿವಿ ಒಳಗೆ ಹೋಗಲು ಅವಕಾಶ ನೀಡದ ಕಾರಣ ಪ್ರತಿಭಟನೆ ತೀವ್ರಗೊಳಿಸಿದ ವಿದ್ಯಾರ್ಥಿಗಳು, ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಇನ್ನೂ ಪ್ರತಿಭಟನೆ ತೀವ್ರಗೊಳ್ಳುತ್ತಿದಂತೆ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಭೇಟಿ ನೀಡಿ, ವಿದ್ಯಾರ್ಥಿಗಳ ಮನವೊಲಿಸಲು ಮುಂದಾದರೂ ಕೂಡ, ಇದಕ್ಕೆ ಜಗ್ಗದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...