ಧಾರವಾಡ | ಪಾದಚಾರಿ ಪಥಕ್ಕೆ ನುಗ್ಗಿದ ಬಿಆರ್‌ಟಿಎಸ್ ‘ಚಿಗರಿ’; ತಪ್ಪಿದ ಅನಾಹುತ

Date:

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಪ್ರಯಾಣಿಕರಿಗೆ ತ್ವರಿತ ಸಂಚಾರ ಸೇವೆ ನೀಡಲು ಪ್ರಾರಂಭಿಸಲಾಗಿರುವ ಬಿಆರ್‌ಟಿಎಸ್ ಚಿಗರಿ ಬಸ್‌ಗಳ ಅವಘಡಗಳು ಮುಂದುವರೆದಿವೆ. ಇಂದು ಧಾರವಾಡದ ಜನನಿಬಿಡ ಪ್ರದೇಶದಲ್ಲಿಯೇ ಚಿಗರಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಪಥಕ್ಕೆ ನುಗ್ಗಿದ್ದು, ದೊಡ್ಡ ಅನಾಹುತ ತಪ್ಪಿದೆ.

- Advertisement -

ಧಾರವಾಡದ ಅಂಜುಮನ್ ಸಂಸ್ಥೆಯ ಬಳಿಯ ಬಿಆರ್‌ಟಿಎಸ್ ಟರ್ಮಿನಲ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್‌, ಟರ್ಮಿನಲ್‌ನಿಂದ ಹೊರಬಂದ ಕೂಡಲೇ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಪಥಕ್ಕೆ ನುಗ್ಗಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಒಂದು ಬೈಕ್ ಹಾಗೂ ರಸ್ತೆಬದಿಯ ಸಂಚಾರಿ ವ್ಯಾಪಾರಿಯ ತಳ್ಳುಗಾಡಿಗೆ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜನರು ಹೆಚ್ಚಾಗಿ ಓಡಾಡುವ ಪ್ರದೇಶದಲ್ಲಿಯೇ ಈ ಘಟನೆ ನಡೆದಿದ್ದು, ಒಂದು ವೇಳೆ ಪಾದಚಾರಿಗಳ ಮೇಲೆ ನುಗ್ಗಿದ್ದರೆ ಏನಾಗುತ್ತಿತ್ತು ಎಂದು ಊಹಿಸಿಕೊಂಡ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಇತ್ತೀಚೆಗೆ ನವಲೂರು ಬಳಿ ಇಬ್ಬರು ಯುವತಿಯರಿಗೆ ಚಿಗರಿ ಬಸ್‌ ಡಿಕ್ಕಿ ಹೊಡೆದಿತ್ತು. ಇದರಿಂದ ಆಕ್ರೋಶಗೊಂಡ ಜನರು ಕಳೆದ ಬುಧವಾರ ಸತ್ತೂರು ಬಳಿ ಬಸ್‌ ತಡೆದು ಪ್ರತಿಭಟನೆ ನಡೆಸಿದ್ದರು.

ಆ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಬಿಆರ್‌ಟಿಎಸ್ ಚಿಗರಿ ಬಸ್‌ ಅವಘಡ ನಡೆದಿರುವುದು ಅವಳಿನಗರದ ಜನರಲ್ಲಿ ಆಕ್ರೋಶ ಮೂಡಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...