ಧಾರವಾಡ | ಬಾಲ್ಯವಿವಾಹ ತಡೆಗೆ ಸಮಿತಿಗಳು ಕ್ರಿಯಾಶೀಲವಾಗಲಿ: ಶೇಖರಗೌಡ ರಾಮತ್ನಾಳ

Date:

ಬಾಲ ಕಾರ್ಮಿಕ, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆದು, ಮಕ್ಕಳನ್ನು ರಕ್ಷಿಸಲು ತಹಶೀಲ್ದಾರ್ ನೇತೃತ್ವದ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನಿರಂತರ ತಪಾಸಣೆ ಕೈಗೊಳ್ಳಬೇಕು ಎಂದು‌ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಧಾರವಾಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಧಾರವಾಡ ತಾಲೂಕು‌ ಮಟ್ಟದ ಹಲವು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

“ಮಕ್ಕಳಿಗೆ ಸಂವಿಧಾನಾತ್ಮಕವಾಗಿ ಸಿಗುವ ಹಕ್ಕು ದೊರೆಯುವಂತೆ ಮಾಡುವುದು ಎಲ್ಲರ ಕರ್ತವ್ಯ. ಮಕ್ಕಳ ಪ್ರಯಾಣಕ್ಕೆ ಸುರಕ್ಷಿತ ಸಾರಿಗೆ, ಶಾಲೆ, ವಸತಿ ನಿಲಯಗಳಲ್ಲಿ ಉತ್ತಮ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪೋಕ್ಸೊ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಸಮಾಜದಲ್ಲಿ ಹೆಚ್ಚು ಅರಿವು ಮೂಡಿಸಬೇಕು. ಶಾಲಾ ಮಕ್ಕಳಲ್ಲಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳ ಕುರಿತು ಮಾಹಿತಿ ದೊರೆತ ಕೂಡಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಕ್ರಮ‌ ಕೈಗೊಳ್ಳಬೇಕು” ಎಂದು ಶೇಖರಗೌಡ ಅವರು ತಿಳಿಸಿದರು.

“ತಮ್ಮ ಕರ್ತವ್ಯದ ನಿರ್ಲಕ್ಷ್ಯದಿಂದ ಮಕ್ಕಳಿಗೆ ಹಾನಿ ಆಗದಂತೆ ಜವಾಬ್ದರಿಯಿಂದ ಅಧಿಕಾರಿಗಳು ಕೆಲಸ ಮಾಡಬೇಕು. ವಿಶೇಷವಾಗಿ ಶಿಥಿಲವಾದ ಶಾಲಾ ಕಟ್ಟಡಗಳ, ವಸತಿಶಾಲೆ ಕಟ್ಟಡಗಳ ಬಗ್ಗೆ ಪರಿಶೀಲಿಸಬೇಕು. ದುರಸ್ತಿ ಇದ್ದರೆ ಕೂಡಲೇ ಸರಿ ಮಾಡಿಸಬೇಕು” ಎಂದು ಹೇಳಿದರು.

“ಬಾಲ್ಯವಿವಾಹಗಳ ಬಗ್ಗೆ ಎಚ್ಚರವಹಿಸಬೇಕು. ಸಾಮೂಹಿಕ ವಿವಾಹಗಳ ಅನುಮತಿಸುವಾಗ ನೋಂದಾಯಿತರ ದಾಖಲಾತಿಗಳ ಸಮಗ್ರ ಪರಿಶೀಲನೆ ಆಗಬೇಕು. ಪಾಲಕರಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಪ್ಪದೇ ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ: ಸಚಿವ ರಾಜಣ್ಣ

ಧಾರವಾಡ ತಹಶೀಲ್ದಾರ್ ದೊಡ್ಡಪ್ಪ ಹೂಗಾರ, ತಾಲೂಕು ಪಂಚಾಯತ್ ಇಒ ಗಂಗಾಧರ ಕಂದಕೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ತಾಲೂಕು ಆರೋಗ್ಯಾಧಿಕಾರಿ ಡಾ. ಕೆ ಎನ್ ತನುಜಾ ಸೇರಿದಂತೆ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ, ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖಾಧಿಕಾರಿಗಳು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...