ಧಾರವಾಡ | ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಆಗ್ರಹ

Date:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 4 ತಿಂಗಳಿಂದ ವೇತನ ಸಿಗದೆ ಪರಿತಪಿಸುವಂತಾಗಿದೆ. ಹಾಗಾಗಿ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಿ, ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ ಉಮಾದೇವಿ ಒತ್ತಾಯಿಸಿದರು.

- Advertisement -

ಧಾರವಾಡ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಜಿಲ್ಲೆಯಾದ್ಯಂತ ಮಕ್ಕಳ ಆರೋಗ್ಯದ ವಿಷಯವಾಗಲಿ ಅಥವಾ ಅವರಿಗೆ ಪೌಷ್ಠಿಕ ಆಹಾರ ತಲುಪಿಸುವ ವಿಷಯವಾಗಿರಲಿ ಕಳೆದ 50 ವರ್ಷಗಳಿಂದ ಈ ದಿಶೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ಐಸಿಡಿಎಸ್ ಯೋಜನೆಯನ್ನು ಜಿಲ್ಲೆಯ ಪ್ರತಿಯೊಂದು ಮನೆಗೆ ಮುಟ್ಟಿಸಿ ಸದೃಢ ಮಕ್ಕಳನ್ನು ಬೆಳೆಸಲು ಪ್ರತಿ ಮಗುವನ್ನು ತಮ್ಮ ಮಗುವೆಂದೇ ಸಲಹುತ್ತಿರುವವರು ಇದೇ ತಾಯಂದಿರು” ಎಂದರು.

“ಇವರ ಗೋಳು-ಸಮಸ್ಯೆಗಳು ಮಾತ್ರ ಯಾರಿಗೂ ಬೇಡವಾಗಿವೆ. ಇಂದಿನ ಬೆಲೆ ಏರಿಕೆ ದಿನಗಳಲ್ಲಿ ನಾಲ್ಕು ತಿಂಗಳಿನಿಂದ ಇವರಿಗೆ ಗೌರವಧನ ಬಾರದೇ ಇವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇಂದು ನಿಯಮಿತವಾಗಿ ಸಂಬಳ ದೊರಕುವ ಸರ್ಕಾರಿ ನೌಕರರೇ ಒಂದು ತಿಂಗಳು ವೇತನ ಬರದಿದ್ದಾಗ ಪರದಾಡುವಂತಹ ಸಂಭವವಿರುವ ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ನಾಲ್ಕು ತಿಂಗಳಿನಿಂದ ಇವರುಗಳು ಬದುಕನ್ನು ಹೇಗೆ ಎದುರಿಸುತ್ತಿರಬಹುದು” ಎಂದು ಪ್ರಶ್ನಿಸಿರಬಹುದು.

“ಇವರುಗಳು ಎದುರಿಸುತ್ತಿರುವ ಸಮಸ್ಯೆಗಳು ಹಲವಾರು. ಮಕ್ಕಳಿಗೆಂದು ಕೊಡುವ ಮೊಟ್ಟೆಗಳು ತಿಂಗಳ ಮೊದಲನೇ ದಿನ ಕೇಂದ್ರಕ್ಕೆ ಬರುವುದು ಬಿಟ್ಟು 15ನೇ ತಾರೀಖಿಗೆ ಬರುತ್ತವೆ. ಅದರಲ್ಲಿ ಕೊಳತಿರುವ ಮೊಟ್ಟೆಗಳು ಬರುತ್ತಿದ್ದು ಯಾವುದೇ ಗುಣಮಟ್ಟ ಇರುವುದಿಲ್ಲ. ಇನ್ನೂ ಹಲವಾರು ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಗಳಿಗೆ ಹಲವಾರು ತಿಂಗಳ ಬಾಡಿಗೆ ಬಂದಿಲ್ಲ” ಎಂದು ಆರೋಪಿಸಿದರು.

“ಹಲವಾರು ಜ್ವಲಂತ ಸಮಸ್ಯೆಗಳಿಂದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಬಳಲುತ್ತಿದ್ದು, ಅವರ ನ್ಯಾಯಯುತ ಹಕ್ಕುಗಳನ್ನು ಪೂರೈಸನೇಕು ಎಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಧಾರವಾಡ ಜಿಲ್ಲಾ ಘಟಕದ ಕಾರ್ಯಕರ್ತೆಯರು ಆಗ್ರಹಿಸಿದರು.

“ಕಳೆದ 4 ತಿಂಗಳುಗಳಿಂದ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಐದು ತಿಂಗಳಿನಿಂದ ಬಾಕಿ ಇರುವ ತರಕಾರಿ ಬಿಲ್ಲನ್ನು ಪಾವತಿಸಬೇಕು. ಧಾರವಾಡ ಶಹರ ವೃತ್ತದಲ್ಲಿ ಕೂಡಲೇ ಬಾಕಿ ಇರುವ ಮೊಟ್ಟೆ ಬಿಲ್ ಮತ್ತು ಬಾಡಿಗೆ ಬಿಲ್ಲುಗಳನ್ನು ಕೂಡಲೇ ಪಾವತಿಸಬೇಕು. ಎಚ್‌ಎನ್‌ಎಸ್ ಸರ್ವೆಯ ₹500 ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

“ಜಿಲ್ಲೆಯಲ್ಲಿ ನಿವೃತ್ತಿ ಹೊಂದಿದ ಕಾರ್ಯಕರ್ತರಿಗೆ ಆದೇಶದಂತೆ ಇಡಿಗಂಟನ್ನು ಯಾವುದೇ ವಿಳಂಬವಿಲ್ಲದೆ ನೀಡಬೇಕು. ರಾಜ್ಯ ವ್ಯಾಪಿ ಒಂದೇ ಸಮವಸ್ತ್ರ ನೀಡಲು ಕ್ರಮ ಕೈಗೊಳ್ಳಬೇಕು. ಸೇವಾ ಹಿರಿತನದ ಆಧಾರದ ಮೇಲೆ ಅರ್ಹ ಕಾರ್ಯಕರ್ತರಿಗೆ ಮೇಲ್ವಿಚಾರಕರಾಗಲು ಮುಂಬಡ್ತಿ ನೀಡಬೇಕು. ಐಸಿಡಿಎಸ್ ಯೋಜನೆಯ ಕೆಲಸಗಳನ್ನು ಬಿಟ್ಟು ಉಳಿದ ಯಾವುದೇ ಕೆಲಸಗಳನ್ನು ಕಾರ್ಯಕರ್ತೆಯರಿಗೆ ವಹಿಸಬಾರದು. ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು” ಎಂದು ಆಗ್ರಹಿಸಿದರು.

ಭುವನಾ ಬಳ್ಳಾರಿ ಜಿಲ್ಲಾ ಸಂಚಾಲಕಿ ಸೇರಿದಂತೆ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಧಾರವಾಡ | ಸಂಶೋಧಕನಿಗೆ ತಾಳ್ಮೆ, ಅಧ್ಯಯನ, ಕ್ಷೇತ್ರ ಕಾರ್ಯ ಮುಖ್ಯ: ಶಿವಕುಮಾರ ಮಹಾಸ್ವಾಮಿಗಳು

"ಸಂಶೋಧನೆ ಎಂಬುದು ಒಂದು ತಪಸ್ಸು ಇದ್ದಂತೆ. ಅನೇಕ ಸಮಸ್ಯೆ, ಅನಾನುಕೂಲತೆಗಳನ್ನು ಎದುರಿಸಿ...