ನ್ಯಾಯಾಲಯದಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ತನಿಖಾ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಬೇಕು. ಫೋಕ್ಸೊ ಪ್ರಕರಣಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು”ಎಂದು ವಿಧಾನ ಪರಿಷತ್ತನ ಶಾಸಕ,, ಎಫ್.ಹೆಚ್.ಜಕ್ಕಪ್ಪನವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಧಾರವಾಡ ಪಟ್ಟಣದ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ 2026 ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆ ಹಾಗೂ 2026 ನೇ ವರ್ಷದ ಎರಡನೇ ತ್ರೈಮಾಸಿಕ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದರು.
“ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣಗಳನ್ನು ಕೂಡಲೇ ಪರಿಹರಿಸಬೇಕು. ಅಲ್ಲದೇ ದಾಖಲಾದ ಪ್ರಕರಣಗಳಿಗೆ ಪರಿಹಾರದ ಮೊತ್ತವನ್ನು ಮಂಜೂರು ಮಾಡಿ, ವಿತರಿಸಬೇಕು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ, ಇಎಸ್‍ಐ, ಪಿಎಫ್, ಆರೋಗ್ಯ ತಪಾಸಣೆ, ಸುರಕ್ಷತಾ ಪರಿಕರ, ಗುಣಮಟ್ಟದ ಉಪಹಾರ, ಗೃಹಭಾಗ್ಯ ಯೋಜನೆಯಡಿ ಮನೆ, ವಿಶ್ರಾಂತಿ ಗೃಹ, ಅನುಕಂಪದ ಆಧಾರದ ಉದ್ಯೋಗ, ಆರ್ಥಿಕ ಸೌಲಭ್ಯ ಹಾಗೂ ಜೀವವಿಮೆ ಸೌಲಭ್ಯ ನೀಡಲು ಅಧಿಕಾರಿಗಳು ಮುಂದಾಗಬೇಕು” ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ, “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಫೋಕ್ಸೊ ಹಾಗೂ ದೌರ್ಜನ್ಯ ಕಾಯ್ದೆ ಅಡಿ ದಾಖಲಾದ ಪ್ರಕರಣಗಳನ್ನು ಇತ್ಯರ್ಥ ಪಡಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೆÇಲೀಸ್ ವರಿಷ್ಠಾದಿಕಾರಿ ಗುಂಜನ್ ಆರ್ಯ, ಡಿಸಿಪಿ ರವೀಶ್ ಸಿ.ಆರ್. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಕೀಲರು, ಸಮಾಜ ಮುಖಂಡರು ಉಪಸ್ಥಿತರಿದ್ದರು.




