ಧಾರವಾಡ | ಆಧಾರ್ ಜೋಡಣೆ ಸುಳ್ಳು ಸಂದೇಶ; ತಪ್ಪು ಮಾಹಿತಿ ನಂಬ ಬೇಡಿ: ಜಂಟಿ ನಿರ್ದೇಶಕ

Date:

ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ತಮ್ಮ ಆಧಾರ್ ಬಯೋಮೆಟ್ರಿಕ್ ನೀಡಿ, ಕೆವೈಸಿ ಅಪ್‌ಡೇಟ್‌ ಮಾಡಿಸಲು ಯಾವುದೇ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿಲ್ಲ. ಇಂತಹ ತಪ್ಪು ಮಾಹಿತಿ ಅಥವಾ ಸುಳ್ಳು ಸಂದೇಶಗಳನ್ನು ಗ್ರಾಹಕರು ನಂಬಬಾರದೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾದ್ಯಮ ಪ್ರಕಟಣೆ ನೀಡಿರುವ ಅವರು, “ಕೆಲವು ಸಮೂಹ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಸುಳ್ಳು ಸಂದೇಶದಿಂದ ಗ್ರಾಹಕರು ಜಿಲ್ಲೆಯಾದ್ಯಂತ ಗ್ಯಾಸ್ ಏಜೆನ್ಸಿಗಳ ಮುಂದೆ ಕೆವೈಸಿ ಮಾಡಿಸಲು ಸಾಲುಗಟ್ಟಿ ನಿಲುತ್ತಿರುವ ಕುರಿತು ವರದಿಯಾಗುತ್ತಿದೆ. ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸಲು ಡಿಸೆಂಬರ 31 ಕೊನೆಯ ದಿನಾಂಕವಲ್ಲ ಮತ್ತು  ಸಬ್ಸಿಡಿಗಾಗಿ ಗ್ರಾಹಕರು ನಿಗದಿತ ದಿನಾಂಕದೊಳಗೆ ಕೆವೈಸಿ ಮಾಡಿಸಿಕೊಳ್ಳಬೇಕೆಂಬುವುದು ತಪ್ಪು ಮಾಹಿತಿಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಾರ್ವಜನಿಕರು ಯಾವುದೇ ರೀತಿಯ ವಾಟ್ಸ್‍ಪ್ ಮೆಸೆಜ್ ಹಾಗೂ ವದಂತಿಗಳನ್ನು ನಂಬಬಾರದು ಮತ್ತು ಅನಗತ್ಯವಾಗಿ ಗೊಂದಲಗಳಿಗೆ ಒಳಗಾಗಬಾರದು. ಗ್ರಾಹಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದಾಗಿದೆ. ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವುದು ಬೇಡವೆಂದು ಅಡುಗೆ ಅನಿಲ ಸಂಪರ್ಕ ಹೊಂದಿದ ಗ್ರಾಹಕರಿಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...