ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

Date:

“ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ” ಎಂದು ವಿಧಾನಸಭಾ ಪರಿಷತ್ ಸದ್ಯಸರು ಎಫ್.ಹೆಚ್.ಜಕ್ಕಪ್ಪನವರ ಅವರು ಹೇಳಿದರು.

- Advertisement -

ಧಾರವಾಡ ಪಟ್ಟಣದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಧಾರವಾಡ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2026 ಹಾಗೂ ಯುವ ಸಂಸತ್ತು ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಬಸವಣ್ಣನವರ ಅನುಭವ ಮಂಟಪದಿಂದ ಹಿಡಿದು ಚಾಮರಾಜನಗರದವರೆಗೆ ಸುಮಾರು 31 ಜಿಲ್ಲೆಗಳನ್ನು ಹಾದುಹೋಗುವ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಸಂವಿಧಾನಕ್ಕೆ ನಿಷ್ಠೆ ತೋರಿದ ಹೆಮ್ಮೆ ನಮ್ಮ ರಾಜ್ಯದ್ದಾಗಿದೆ. ಇಂದಿನ ಯುವಕರಲ್ಲಿ ದೇಶದ ಇತಿಹಾಸ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಯುವಸಂಸತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಹಾಗೂ ಯುವಜನರಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಸುವ ಕೆಲಸವಾಗುತ್ತಿದೆ” ಎಂದು ತಿಳಿಸಿದರು.

“ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ, ಭಾರತೀಯರಲ್ಲಿ ಇರಬೇಕಾದ ಮಾನಸಿಕ ಸ್ಥಿತಿ ಹಾಗೂ ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕಿದೆ. ಡಾ. ಬಿ. ಆರ್. ಅಂಬೇಡ್ಕರ್, ಮಹಾತ್ಮಾ ಗಾಂಧಿ ಮತ್ತು ಜವಾಹರಲಾಲ್ ನೆಹರೂ ಅವರು ಕಂಡಿದ್ದ ಭಾರತದ ಕನಸು ಹಾಗೂ ನಾವು ಇಂದು ಸಾಗುತ್ತಿರುವ ಹಾದಿಯ ಬಗ್ಗೆ ಚಿಂತನೆ ನಡೆಸಬೇಕಾಗಿದೆ” ಎಂದು ಅವರು ಹೇಳಿದರು.

“ನಾವೆಲ್ಲರೂ ಜಾತಿ-ಭೇದವನ್ನು ಮರೆತು ನಾವೆಲ್ಲ ಭಾರತೀಯರು ಎಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು. ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ಭ್ರಾತೃತ್ವ ಮತ್ತು ಸಮಾನತೆ ನಮ್ಮಲ್ಲಿ ಬೆಳೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿರುವುದಿಲ್ಲ. ಯುವಮನಸ್ಸುಗಳಿಗೆ ಈ ಸಂವಿಧಾನಿಕ ಮೌಲ್ಯಗಳನ್ನು ತಿಳಿಸಿ, ಹೇಳುವ ಹಾಗೂ ದೇಶದ ಐಕ್ಯತೆಯನ್ನು ಕಾಪಾಡುವ ಜವಾಬ್ದಾರಿ ಹಿರಿಯರ ಮೇಲಿದೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ಹೇಳಿದಂತೆ, ಬ್ರಿಟಿಷರು ಹೋದ ನಂತರ ನಮ್ಮ ಕುಂದುಕೊರತೆಗಳಿಗೆ ನಾವೇ ಹೊಣೆಯಾಗಿದ್ದು, ಸ್ವಂತ ಆತ್ಮಾವಲೋಕನ ಮಾಡಿಕೊಳ್ಳುವುದು ಅಗತ್ಯವಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಗೂ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನ ಹಾಗೂ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯು ನಮಗೆ ಮಾತನಾಡುವ ಸ್ವಾತಂತ್ರ್ಯ, ಸಂಚಾರ ಸ್ವಾತಂತ್ರ್ಯ ಹಾಗೂ ಮತದಾನದ ಹಕ್ಕನ್ನು ನೀಡಿದೆ. ಸಂವಿಧಾನ ನೀಡಿದ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ಪ್ರತಿಯೊಬ್ಬ ನಾಗರಿಕನೂ ತಿಳಿದುಕೊಂಡಿರಬೇಕು” ಎಂದು ಹೇಳಿದರು.

“ಕರ್ನಾಟಕ ಸರ್ಕಾರವು ಯುವಕರಿಗಾಗಿ ಭಾರತ್ ಜೋಡೋ ಯುವ ಸಂಘ 16 ರಿಂದ 35 ವರ್ಷದವರಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಕಾಲೇಜುಗಳಲ್ಲಿ ಯೂನಿಯನ್ ಚುನಾವಣೆಗಳನ್ನು ಮರು ಪ್ರಾರಂಭಿಸುವ ಕುರಿತು ಕರ್ನಾಟಕ ಸರ್ಕಾರ ಯೋಜನೆಗಳನ್ನು ಪ್ರಾರಂಭಿಸುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಅವರು ಮಾತನಾಡಿ, “ಪ್ರಜಾಪ್ರಭುತ್ವ ಎಂದರೆ ಜನರಿಂದ, ಜನರಿಗಾಗಿ ಜನರಿಗೋಸ್ಕರ ಇರುವ ಆಡಳಿತ. ನಮ್ಮ ಸಂವಿಧಾನದ ಪೀಠಿಕೆಯು ನಾವು ಭಾರತದ ಪ್ರಜೆಗಳು ಎಂಬ ಸಾಲಿನಿಂದಲೇ ಪ್ರಾರಂಭವಾಗುತ್ತದೆ. ಇದು ಯಾವುದೇ ಒಬ್ಬ ವ್ಯಕ್ತಿಯಿಂದ ಆರಂಭವಾಗುವುದಿಲ್ಲ, ಬದಲಾಗಿ ಭಾರತದ ಸಮಸ್ತ ಜನರಿಂದ ಸಾಗುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಭಾರತದ ಸಂವಿಧಾನದ ಪೀಠಿಕೆಯನ್ನು ಭೋದಿಸಿದರು. ಕರ್ನಾಟಕ ವಿಶ್ವವಿದ್ಯಾಲಯದ ಮಾನವ ಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕ ಡಾ. ಸದಾನಂದ ಸುಗಂಧಿ ಅವರು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಪೋಲಿಸ್ ವರಿಷ್ಠಾಧಿಕಾತು ಗುಂಜನ್ ಆರ್ಯ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಪ್ರೊಬೆಶನೇರಿ ಐಎಎಸ್ ಅನುಪ್ರಿಯಾ ಸಾಕ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉಮೇಶ ಬೊಮ್ಮಕ್ಕನವರ ಉಪಸ್ಥಿತರಿದ್ದರು. ನವಲಗುಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ರಮೇಶ ಕಬ್ಬೇನಹಳ್ಳಿ ಅವರು ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಗಂಗಾಧರ ದೊಡ್ಡಮನಿ ಸ್ವಾಗತಿಸಿದರು. ಮೊರಾರ್ಜಿ ವಸತಿ ಶಾಲೆಯ ಶಿವಲಿಂಗಯ್ಯ ಹೆಬ್ಬಳ್ಳಿಮಠ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರು, ಸಮಾಜದ ಮುಖಂಡರು, ಜಿಲ್ಲೆಯ ವಸತಿ ಶಾಲೆಯ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...