ಧಾರವಾಡ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದ ಇಲಾಖೆ, ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಿಸಿದೆ.
ಜಿಲ್ಲೆಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಕಂದಾಯ) ಪ್ರಕರಣ ಹೊರಡಿಸಿದ್ದು, “ಶಟಿಗೆಮ್ಮನಗುಡಿ ಅಂಗನವಾಡಿ ಕೇಂದ್ರದ ಸಂಖ್ಯೆಯು 41 ಇದ್ದು, ಅದನ್ನು ತಪ್ಪಾಗಿ 42 ಎಂದು ಉಲ್ಲೇಖಿಲಾಗಿದೆ. ಹೀಗಾಗಿ, ಅರ್ಜಿದಾರರಿಗೆ ಸಮಸ್ಯೆಯಾಗಿದೆ. ಅದನ್ನು ಸರಿಪಡಿಸುವ ಉದ್ದೇಶದಿಂದ ಅರ್ಜಿ ಸಲ್ಲಿಸುವ ಅವಧಿಯನ್ನು 15 ದಿನಗಳವರೆಗೆ ವಿಸ್ತರಿಸಲಾಗಿದೆ. ಅಕ್ಟೋಬರ್ 13ರ ವರೆಗೆ ಅರ್ಹರು ಅರ್ಜಿ ಸಲ್ಲಿಸಬಹುದು” ಎಂದು ತಿಳಿಸಿದ್ದಾರೆ.
“ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಲೋಕೂರ ಬಿಲ್ಡಿಂಗ್, ಹಿಂದಿ ಪ್ರಚಾರ ಸಭಾ ಹತ್ತಿರ ಧಾರವಾಡ ದೂರವಾಣಿ ಸಂಖ್ಯೆ:0836-2440733ಕ್ಕೆ ಸಂಪರ್ಕಿಸಬಹುದು” ಎಂದು ತಿಳಿಸಿದ್ದಾರೆ.