ಧಾರವಾಡ | ಸೆ.14ರಂದು ಕುಂದಗೋಳ ಬಂದ್‌ಗೆ ರೈತ ಸಂಘ ಕರೆ

Date:

ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 14 ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸಂಪೂರ್ಣ ಬಂದ್‌ಗೆ ಕರ್ನಾಟಕ ರೈತ ಸಂಘ, ರೈತ ಸಂಘಗಳ ಒಕ್ಕೂಟದಿಂದ ಕರೆ ನೀಡಿದ್ದಾರೆ.

ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ ಮಾತನಾಡಿ, “ಈ ವರ್ಷದ ಮಳೆಯ ಅಭಾವದಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಮಳೆಯಾಗದೆ ಬೆಳೆ ನಾಶವಾಗಿ ರೈತರು ಗೋಳಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕುಂದಗೋಳ ತಾಲೂಕು ಬಂದ್‌ಗೆ ಕರೆ ನೀಡಲಾಗುತ್ತಿದೆ” ಎಂದು ಈ ದಿನ.ಕಾಮ್‌ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ಅಗತ್ಯತೆ ಈಡೇರಿಕೆಗೆ ಸೆ.25ರಂದು ರಾಜ್ಯಾದ್ಯಂತ ಧರಣಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಕುರಿತು ಹಲವು ಬಾರಿ ಮನವಿ ಮಾಡಿಕೊಂಡರೂ ಏನೂ ಪ್ರಯೋಜನವಾಗಿಲ್ಲ. ಹಿಂದಿನ ಸರ್ಕಾರ ಇದ್ದಾಗಿನಿಂದಲೂ ರೈತರ ಗೋಳು ಕೇಳುವವರಿಲ್ಲ. ಈ ಸಲ ರೈತರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದಲ್ಲಿ ಧರಣಿ ಸತ್ಯಾಗ್ರಹ ಮಾಡಲು ಅಣಿಯಾಗಬೇಕಾಗುತ್ತದೆ. ರೈತರ ಸಾಲಮನ್ನಾ, ಕುಂದಗೋಳ ತಾಲೂಕು ಬರಪೀಡಿತ ತಾಲೂಕನ್ನಾಗಿ ಘೋಷಿಸುವುದು, ರೈತರ ಬೆಳೆ ವಿಮೆ ಪರಿಹಾರ ನೀಡುವುದು, ನಾಶವಾದ ಬೆಳೆಗೆ ಪರಿಹಾರ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಬಂದ್‌ಗೆ ಕರೆ ನೀಡಿದ್ದೇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಚಿವ ಸಂತೋಷ್‌ ಲಾಡ್‌ಗೆ ವಿಜಯೇಂದ್ರ ಅಪಮಾನ; ಕ್ಷಮೆ ಯಾಚಿಸಲು ಆಗ್ರಹ

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕೀಳು ಮಟ್ಟದ ಪದ ಬಳಸಿ ಸಚಿವ...

ಧಾರವಾಡ | ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆಗೆ ಅಂಜುಮನ್ ಆಗ್ರಹ

ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ...

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಂಜುಮನ್ ಸಂಸ್ಥೆಯಿಂದ ಮನವಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿ ಫಯಾಝ್...