ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ; ವಿದ್ಯಾರ್ಥಿಗಳಿಗೆ ಬಯಲೇ ಗತಿ

Date:

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ ಆವರಣ ತುಂಬೆಲ್ಲ ಕಸ-ಕಡ್ಡಿ ತುಂಬಿ, ಅನೈರ್ಮಲ್ಯದಿಂದ ಕೂಡಿದ್ದು, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಭೀತಿ ಸೃಷ್ಟಿಯಾಗಿದೆ.

ಕಲಘಟಗಿ ತಾಲೂಕಿನ ಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ಕೊರಗುತ್ತಿದ್ದು, ಇದರಿಂದ ಅಲ್ಲಿ ಕಲಿಯುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಬೀರುತ್ತ ಪರಿಣಾಮ ಬೀರುತ್ತಿದೆ. ಈ ಶಾಲೆಯಲ್ಲಿ ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಕಲಿಯುತ್ತಿದ್ದಾರೆ. ಇವರಿಗೆ ಒಂದು ಒಳ್ಳೆಯ ಆಟದ ಮೈದಾನ ಇದ್ದರೂ ನಿರ್ವಹಣೆ ಇಲ್ಲದೆ ಇದ್ದರೂ ಇಲ್ಲದಂತಾಗಿದೆ. ಶಾಲೆಯಲ್ಲಿ ಹೈಟೆಕ್ ಶೌಚಾಲಯ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ.

- Advertisement -
aa5e9302 6dec 4a83 95f9 fd46ca5ca2b3

ಶಾಲೆಯ ಆವರಣದಲ್ಲಿ ಇರುವ ಹಳೆಯ ಶೌಚಾಲಯ ನಿರ್ವಹಣೆಯಿಲ್ಲದೆ, ಗಬ್ಬುನಾರುತ್ತಿದೆ. ವಿದ್ಯಾರ್ಥಿಗಳು ಮಲ, ಮೂತ್ರಕ್ಕೆ ರಸ್ತೆಯ ಬದಿಯಲ್ಲೊ, ಶಾಲೆಯ ಕಾಂಪೌಂಡ ಪಕ್ಕದಲ್ಲಿಯೋ ಹೋಗುವಂತಹ ಪರಿಸ್ಥಿತಿ ಇದೆ. ವಿದ್ಯಾರ್ಥಿನಿಯರ ಪಾಡಂತು ಹೇಳತಿರದು, ಅನೈರ್ಮಲ್ಯದಿಂದ ಕೂಡಿದ, ದುರ್ವಾಸನೆ ಹರಡಿದ ಶೌಚಾಲಯವನ್ನೇ ವಿದ್ಯಾರ್ಥಿನಿಯರು ಬಳಸುತ್ತಿದ್ದು, ಇದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ನಾಲ್ಕು ವರ್ಷ ಕಳೆದರೂ ಪೂರ್ಣಗೊಳ್ಳದ ಹೈಟೆಕ್ ಶೌಚಾಲಯದ ಕಾಮಗಾರಿ: ಕಲಘಟಗಿ ಸರ್ಕಾರಿ ಪ್ರಾಥಮಿಕ ಶಾಲೆಗೆ 2022-23ರಲ್ಲಿ ಮಂಜೂರಾಗಿದ್ದ ಹೈಟೆಕ್ ಶೌಚಾಲಯ ದಾಖಲೆಯಲ್ಲಿ ಮಾತ್ರ ನಿರ್ಮಾಣವಾಗಿದೆ. ಪಂಚಾಯಿತಿ ಶಾಲೆಗೆ ಹಸ್ತಾಂತರವಾಗಿದೆ ಎಂದು ಪಂಚಾಯಿತಿ ಅವರು ಹೇಳಿದರರೇ ಶಾಲೆಯವರು ನಮಗೆ ಹಸ್ತಾಂತರ ಮಾಡಿಲ್ಲ ಎಂದು ಹೇಳುವರು. ವಾಸ್ತವಾಗಿ ಹೈಟೆಕ್ ಶೌಚಾಲಯದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಳಪೆ ಕಾಮಗಾರಿಯಿಂದ ಕೂಡಿದ್ದು, ವಿದ್ಯಾರ್ಥಿಗಳಿಗೆ ಇನ್ನೂ ಅನುಕೂಲವಾಗಲಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

8a826337 aa10 45d5 8d42 4f23d1320962

ಆಟದ ಮೈದಾನ ತುಂಬ ಹುಲ್ಲು, ಕಸ-ಕಡ್ಡಿ: ಶಾಲೆಯಲ್ಲಿ ವಿಶಾಲವಾದ ಆಟದ ಮೈದಾನ ಇದ್ದರೂ, ಆಟಕ್ಕೆ ಯೋಗ್ಯವಾಗಿಲ್ಲ. ಮೈದಾನದ ತುಂಬ ಹುಲ್ಲು ಬೆಳೆದುಕೊಂಡಿದೆ. ಮಳೆಯ ನೀರು ನಿಂತುಕೊಂಡಿದೆ. ಪ್ಲಾಸ್ಟಿಕ್ ಹಾಳೆ, ಕಸ-ಕಡ್ಡಿಯಿಂದ ತುಂಬಿಕೊಂಡಿದೆ ಇದರಿಂದ ವಿದ್ಯಾರ್ಥಿಗಳು ಮೈದಾನದಲ್ಲಿ ಆಟವಾಡಲು ಸಾದ್ಯವಾಗುತ್ತಿಲ್ಲ. ಕೂಡಲೇ ಆಟದ ಮೈದಾನವನ್ನು ಸ್ವಚ್ಛಗೊಳಿಸಿ ವಿದ್ಯಾರ್ಥಿಗಳು ಆಟವಾಡಲು ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈದಿನ.ಕಾಮ್ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರನ್ನು ಸಂಪರ್ಕಿಸಿ ಮಾತನಾಡಲು ಯತ್ನಿಸಿದಾಗ, ಅವರಿಂದ ಸೂಕ್ತ ಪ್ರತಿಕ್ರಿಯೆ ದೊರೆಯಲಿಲ್ಲ.

ಈ ಕುರಿತು ಈದಿನ.ಕಾಮ್‌ ಜೊತೆಗೆ ಸಾಮಾಜಿಕ ಹೋರಾಟಗಾರರೊಬ್ಬರು ಮಾತನಾಡಿ, “ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಯಲ್ಲಿ ಶೌಚಾಲಯ ಮೊದಲಾದ ಅತ್ಯಗತ್ಯ ಸೌಲಭ್ಯಗಳೇ ಇಲ್ಲ. ಹೈಟೆಕ್ ಶೌಚಾಲಯ ಮಂಜೂರಾಗಿ ವರ್ಷಗಳ ಕಾಲ ಕಳೆದರೂ ಅಪೂರ್ಣವಾಗಿ ಉಳಿದಿರುವುದು ಅತ್ಯಂತ ಶೋಚನೀಯ ಸಂಗತಿ. ಶೌಚಾಲಯ ಕಾಮಗಾರಿ ಹಣ ಬಿಡುಗಡೆಯಾಗಿದ್ದರೆ, ಕಾಮಗಾರಿ ಏಕೆ ಪೂರ್ಣಗೊಂಡಿಲ್ಲ? ನಾಲ್ಕು ವರ್ಷಗಳಾದರೂ ಶಾಲೆಗೆ ಏಕೆ ಹಸ್ತಾಂತರಿಸಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಗ್ರಾಮಸ್ಥ ಅಭೀಷೇಕ ರಾಯಕೊಪ್ಪ ಮಾತನಾಡಿ, “ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೂ ದೂರು ಮಾಡಿದರೂ ಕೂಡ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ, 500 ಮಕ್ಕಳು ಇರುವ ಶಾಲೆಯಲ್ಲಿ ಇಸ್ಟೊಂದು ಅವ್ಯವಸ್ಥೆ ಎದ್ದು ಕಾಣುತ್ತಿದೆ. ಮಕ್ಕಳಿಗೆ ಶೌಚಾಯಲ ವ್ಯವಸ್ಥೆ ಸರಿಯಾಗಿಲ್ಲ. ಆಟದ ಮೈದಾನ ಸರಿಯಾಗಿಲ್ಲ. ಶಿಕ್ಷಕರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳ ದೊರೆಯದಂತಾಗಿವೆ. ಕೂಡಲೇ ಹೈಟೆಕ್ ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕುಲ ಮಾಡಬೇಕು. ಆಟದ ಮೈದಾನ ಸ್ವಚ್ಛಗೊಳಿಸಿ ಮಕ್ಕಳಿಗೆ ಆಟವಾಡಲು ಸ್ವಚ್ಛ ಮೈದಾನ ಒದಗಿಸಿ” ಎಂದು ಒತ್ತಾಯಿಸಿದರು.

ಪಂಚಾಯಿತಿ ಹಾಗೂ ಶಾಲಾ ಆಡಳಿತದ ನಡುವಿನ ಜಟಾಪಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳು ತೆರೆದ ಜಾಗದಲ್ಲೇ ಶೌಚಕ್ಕೆ ಹೋಗುವಂತಾಗಿದೆ. ದೂರು ನೀಡಿದರೂ ಯಾವುದೇ ಸೂಕ್ತ ಕ್ರಮವನ್ನು ಕೈಗೊಂಡಿಲ್ಲದಿರುವುದು ದುರಂತ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಜಾಗೃತರಾಗಿ ಹೈಟೆಕ್ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಿ, ಆಟದ ಮೈದಾನವನ್ನು ಸ್ವಚ್ಛಗೊಳಿಸಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಯ ವಾತಾವರಣ ನಿರ್ಮಿಸಿಕೊಡಬೇಕಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...