ಧಾರವಾಡ | ರಾತ್ರೋರಾತ್ರಿ ಜೆಸಿಬಿಯಿಂದ ಮನೆ ಧ್ವಂಸ; ಆರೋಪಿ ವಿರುದ್ಧ ಪ್ರಕರಣ ದಾಖಲು

Date:

ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

- Advertisement -

2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್​ ಶೆಟ್ಟಿ ಎಂಬುವರ ತಂದೆ 6 ಗುಂಟೆ ಜಾಗವನ್ನು ಖರೀದಿಸಿದ್ದರು. ಅಲ್ಲಿಯೇ ಡಾ. ಸತೀಶ್​ ಚಿಕ್ಕದೊಂದು ಮನೆಯನ್ನು ಕಟ್ಟಿದ್ದರು. ಆ ಮನೆಯಲ್ಲಿ ಸತೀಶ್​ ಅವರಿಗೆ ಪರಿಚಯವಿದ್ದ ವ್ಯಕ್ತಿಯೊಬ್ಬ ವಾಸವಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇತ್ತೀಚಿಗೆ ಫಕ್ಕೀರಪ್ಪ ಮನಿಗೇನಿ ಎನ್ನುವ ವ್ಯಕ್ತಿ ಆಗಾಗ ಬಂದು ಸ್ಥಳೀಯ ಬಡಾವಣೆ ಜನರಿಗೆ, ಇದು ನನ್ನ ಜಮೀನು ಎಂದು ಕ್ಯಾತೆ ತೆಗೆಯಲು ಆರಂಭಿಸಿದ್ದ. ಇದೇ ಫಕ್ಕಿರಪ್ಪ ಮನಿಗೇನಿ ಬುಧವಾರ ರಾತ್ರಿ ಏಕಾಏಕಿ ಡಾ. ಸತೀಶ್​ ಅವರ ಮನೆಯನ್ನು ಜೆಸಿಬಿಯಿಂದ ಕೆಡವಿ ಹಾಕಿದ್ದಾನೆ. ಅದೃಷ್ಟವಶಾತ್ ಘಟನೆ ನಡೆದಾಗ ಆ ಮನೆಯಲ್ಲಿ ಯಾರೂ ಇರಲಿಲ್ಲ.

ಇನ್ನು ಘಟನೆ ನಡೆದ ಕೂಡಲೇ ಸ್ಥಳೀಯರು ಜೆಸಿಬಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಜೆಸಿಬಿಯ ಎಲ್ಲ ಟೈಯರ್‌ಗಳ ಗಾಳಿ ತೆಗೆದಿದ್ದಾರೆ. ಕಳೆದ ಕೆಲ ದಿನಗಳಿಂದ ಜೆಸಿಬಿ ಮೂಲಕ ಇಲ್ಲಿ ಕೆಲಸ ಮಾಡಿಸುತ್ತಿರುವ ಫಕ್ಕೀರಪ್ಪ, ಈ ಬಡಾವಣೆಯ ಜಾಗ ತನ್ನದು ಎಂದು ಇಲ್ಲಿನ ಕೆಲವು ಮನೆಗಳ ಕಂಪೌಂಡ್ ಕೂಡ ಒಡೆದು ಹಾಕಿದ್ದಾನೆ, ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ ಆರೋಪಿ, ಚರಂಡಿ ಹಾಗೂ ಕುಡಿಯುವ ನೀರಿನ ಪೈಪುಗಳನ್ನು ಕೂಡ ಕತ್ತರಿಸಿದ್ದಾನಂತೆ. ಇನ್ನು ವಿದ್ಯುತ್ ಕಂಬಗಳ ಸುತ್ತಲಿನ ಮಣ್ಣನ್ನು ತೆಗೆದ ಕಾರಣ, ಅವು ಬೀಳುವ ಸ್ಥಿತಿಗೆ ಬಂದಿವೆ.

ಇಂತಹ ವ್ಯಕ್ತಿಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಡಾ. ಸತೀಶ್​ ಶೆಟ್ಟಿ ಮತ್ತು ಸ್ಥಳೀಯರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಫಕ್ಕೀರಪ್ಪನ ಮೇಲೆ ವಿದ್ಯಾಗಿರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಹಾಗೂ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೂ ಈ ಬಗ್ಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ.

ಮನೆಯಲ್ಲಿ ಮಹಿಳೆಯರಷ್ಟೇ ಇರುವಾಗ, ಬಂದು ಬೆದರಿಕೆ ಹಾಕುತ್ತಾರೆ. ಇವರ ಕಿರುಕುಳದಿಂದ ನಮಗೆ ಆತಂಕವಾಗಿದೆ. ಇವರಿಗೆಲ್ಲ ಕಾನೂನು ಅನ್ನೋದೇ ಇಲ್ಲದಂತಾಗಿದೆ. ಇಪ್ಪತ್ತು-ಮೂವತ್ತು ವರ್ಷಗಳಿಂದ ಮನೆ ಕಟ್ಟಿಕೊಂಡು ಇರೋರಿಗೆಲ್ಲ ಇದೀಗ ಕಿರುಕುಳ, ಬೆದರಿಕೆ ಶುರುವಾಗಿವೆ. ಈ ರೀತಿ ರಾತ್ರೋರಾತ್ರಿ ಬಂದು ಜೆಸಿಬಿಯಿಂದ ಮನೆ ಬೀಳಿಸೋದು ಅಂದರೆ ನಮ್ಮಂಥವರು ಎಲ್ಲಿಗೆ ಹೋಗಬೇಕು. ಕೂಡಲೇ ಇಂಥವರ ಮೇಲೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...