ಧಾರವಾಡ | ಖರ್ಗೆ ಪ್ರಧಾನಿಯಾದರೆ ಬಸವ ರಾಜ್ಯ ನಿರ್ಮಾಣ ಖಂಡಿತ; ಕೆಪಿಸಿಸಿ ವಕ್ತಾರ ವಿಶ್ವಾಸ

Date:

ಹಿರಿಯ ಮುತ್ಸದ್ದಿ ರಾಜಕಾರಣಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆದರೆ 12ನೇ ಶತಮಾನದ ಬಸವ ರಾಜ್ಯದ ಆಡಳಿತ ಆರಂಭವಾಗುತ್ತದೆ ಎಂದು ಹಿರಿಯ ಲಿಂಗಾಯತ ಮುಖಂಡ ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಅಭಿಪ್ರಾಯಪಟ್ಟರು.

ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದಾರೆ.

“ಈ ಹಿಂದೆ ಅನೇಕರು ಈ ದೇಶವನ್ನು ನಾವು ಪ್ರಧಾನಿಗಳಾದಾಗ ರಾಮರಾಜ್ಯ ಮಾಡುತ್ತೇವೆ, ರೈತರ ರಾಜ್ಯ ಮಾಡುತ್ತೇವೆಂದು ಘೋಷಣೆ ಕೂಗಿ ಅಧಿಕಾರಕ್ಕೆ ಬಂದು ರಾಮರಾಜ್ಯವನ್ನೂಮಾಡಲಿಲ್ಲ, ರೈತ ರಾಜ್ಯವನ್ನೂ ಮಾಡಲಿಲ್ಲ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಚಿವ ಸಂಪುಟ ಸಭೆ | ಕಾಲೇಜುಗಳಿಗೆ ನೌಕರರ ನೇಮಕ; ಬುಡಕಟ್ಟು ಪಂಗಡಗಳಿಗೆ ಪೌಷ್ಟಿಕ ಆಹಾರ ಖರೀದಿಗೆ ಒಪ್ಪಿಗೆ

“ಕಲ್ಯಾಣ ಕರ್ನಾಟಕದ ಜಗಜ್ಯೋತಿ ಬಸವಣ್ಣನವರ ಪರಿಸರದಲ್ಲಿ ಬೆಳೆದು ಬಂದ ಮಲ್ಲಿಕಾರ್ಜುನ ಖರ್ಗೆ ಅಪ್ಪಟ ಬಸವವಾದಿಯಾಗಿದ್ದು ಬಸವಣ್ಣನವರ ಕಲ್ಪನೆಯ ಬಸವ ನಾಡು ನಿರ್ಮಿಸುವಲ್ಲಿ ಯಶಸ್ವಿಯಾಗುವ ಎಲ್ಲ ಅರ್ಹತೆ ಪಡೆದಿದ್ದಾರೆ” ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ವಿಶ್ವಾಸ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...