ಧಾರವಾಡ | ವಿವಿಧ ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಸಂಘದ ಒತ್ತಾಯ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 134 ಪೌರಕಾರ್ಮಿಕರ ನೇರನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 15ದಿನಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಅವಳಿನಗರದಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಎಚ್ಚರಿಕೆ ನೀಡಿದ್ದಾರೆ.

ಬುಧವಾರ (ಜ.10) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 134 ಪೌರ ಕಾರ್ಮಿಕರನ್ನು ನೇರನೇಮಕಾತಿ ಮಾಡಿಕೊಳ್ಳಬೇಕು ಎಂದು ಸರ್ಕಾರ 2017ರಲ್ಲಿ ಆದೇಶ ಹೊರಡಿಸಿದೆ. ಆದರೆ, ಈವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಅನಗತ್ಯವಾಗಿ ಪಾಲಿಕೆ ಆಡಳಿತ ವಿಳಂಬ ಮಾಡುವ ಮೂಲಕ ಪೌರಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

11 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುತ್ತ ಬಂದಿದ್ದೇವೆ ಆದರೆ ಈ ವರೆಗೂ ಯಾವ ಬೇಡಿಕೆಗಳು ಇಡೇರಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಾಲಿಕೆಯಲ್ಲಿ ಖಾಲಿಯಿರುವ 340 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಗುತ್ತಿಗೆ ಪೌರಕಾರ್ಮಿಕರ ಪಟ್ಟಿಯಲ್ಲಿರುವ ನಕಲಿ ಪೌರಕಾರ್ಮಿಕರ ಹೆಸರನ್ನು ಕೈ ಬಿಡಬೇಕು, ಸಾಮಾನ್ಯ ಸಭೆಯ ಠರಾವಿನಂತೆ ಪಾಲಿಕೆ ಆವರಣದಲ್ಲಿ ಪೌರಕಾರ್ಮಿಕರ ಸಂಘಕ್ಕೆ ಕೊಠಡಿ ನೀಡುವುದು, ಕನಿಷ್ಠ ವೇತನ ಬಾಕಿ ಪಾವತಿ, ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವುದು, ನಿವೃತ್ತಿ ವೇತನ ನೀಡುವುದು, ನಿಗದಿತ ಸಮಯಕ್ಕೆ ಮಾಸಿಕ ವೇತನ ಪಾವತಿ, ಸಲಕರಣೆ ಒದಗಿಸುವುದು ಸೇರಿದಂತೆ ನಮಗೆ ಸಿಗಬೇಕಾದ ಶಾಸನಬದ್ಧ ಹಕ್ಕುನೀಡದೆ ಜೀತದಾಳುಗಳಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದತ್ತಪ್ಪ ಆಪೂಸಪೇಟ ಗಂಗಮ್ಮ ಸಿದ್ರಾಮಪೂರ, ಲಕ್ಷ್ಮಿ ಬೇತಾಪಲ್ಲಿ ಇದ್ದರು‌.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...