ಧಾರವಾಡ | ಸರ್ಕಾರದ ಯೋಜನೆ ಪಡೆಯಲು ಎಫ್‌ಐಟಿ ಕಡ್ಡಾಯ: ಕೃಷಿ ಇಲಾಖೆ

Date:

ಬರ ಘೋಷಿತ ತಾಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಎಫ್‍ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಫ್‍ಐಡಿಯಲ್ಲಿ ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರಧನ ಸೌಲಭ್ಯ ದೊರೆಯುವುದರಿಂದ ರೈತರು ತಮ್ಮ ಎಲ್ಲಾ ಜಮೀನಿನ ಸರ್ವೇನಂಬರ ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಜಿಲ್ಲೆಯಲ್ಲಿನ ಒಟ್ಟು 3ಲಕ್ಷ ಪ್ಲಾಟ್‍ಗಳ ಪೈಕಿ ಈಗಾಗಲೇ 2.4 ಲಕ್ಷ ಪ್ಲಾಟ್‍ಗಳು ಅಂದರೆ ಶೇ.80ರಷ್ಟು ಪ್ಲಾಟಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರಿಸಲಾಗಿದೆ ಮತ್ತು ಸುಮಾರು 60ಸಾವಿರ ಪ್ಲಾಟ್‍ಗಳು ಅಂದರೆ ಶೇ.20ರಷ್ಟು ಬಾಕಿ ಇವೆ.

ಧಾರವಾಡ ತಾಲೂಕಿನ 13,927, ನವಲಗುಂದ ತಾಲೂಕಿನ 5,945, ಹುಬ್ಬಳ್ಳಿ ತಾಲೂಕಿನ 8,493, ಕಲಘಟಗಿ ತಾಲೂಕಿನ 12,036, ಕುಂದಗೋಳ ತಾಲೂಕಿನ 8,848, ಹುಬ್ಬಳ್ಳಿನಗರ ತಾಲೂಕಿನ 6,355, ಅಳ್ನಾವರ ತಾಲೂಕಿನ 987 ಮತ್ತು ಅಣ್ಣಿಗೇರಿ ತಾಲೂಕಿನ 3,476 ಪ್ಲಾಟ್‍ಗಳು ಎಫ್‍ಐಡಿಯಲ್ಲಿ ಸೇರ್ಪಡೆಯಾಗಿಲ್ಲ.

ಆದ್ದರಿಂದ ಈ ಕೂಡಲೇ ಇನ್ನೂ ಎಫ್‍ಐಡಿ ಮಾಡಿಸದ ರೈತರು ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬೇಕು ಹಾಗೂ ಫ್ರೂಟ್ಸ್ ಐಡಿ ಹೊಂದಿದವರು ತಮ್ಮ ಎಲ್ಲ ಸರ್ವೇನಂಬರಗಳನ್ನು ಎಫ್‍ಐಡಿ ಜೊತೆ ಸೇರಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ರೈತರು ಎಫ್‍ಐಡಿ ಮಾಡಿಸಿಕೊಳ್ಳಲು ಅವರ ಆಧಾರಕಾರ್ಡ್‌, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ, ತಮ್ಮ ಮೊಬೈಲ್ ಸಂಖ್ಯೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಆಗಿದ್ದಲ್ಲಿ ಅವರ ಜಾತಿ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸಬೇಕು.

ಬರಪರಿಹಾರದ ಹಣ ಮಾತ್ರವಲ್ಲದೇ, ಬೆಳೆವಿಮೆ, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಸರ್ಕಾರದ ಯಾವುದೇ ಯೋಜನೆಯ ಸವಲತ್ತು ಹಾಗೂ ಬ್ಯಾಂಕ್ ಸಾಲಪಡೆಯಲು ಎಫ್‍ಐಡಿ ಕಡ್ಡಾಯವಾಗಿದೆ.

ರೈತರು ಮೇಲೆ ತಿಳಿಸಿದ ದಾಖಲಾತಿಗಳೊಂದಿಗೆ ವಿಳಂಬ ಮಾಡದೇ ಈ ಕೂಡಲೇ ಎಫ್‍ಐಡಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಕಿರಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...