ಕೆಪಿಎಸ್‌ಸಿ ಮತ್ತು ಕೆಇಎ ನೇಮಕಾತಿಗಳಲ್ಲಿ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಈ ಪ್ರತಿಭಟನೆಯಲ್ಲಿ ಕನ್ನಡ ಭಾಷೆಯ ಮಹತ್ವವನ್ನು ಕಡಿಮೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಹಿಂದೆ ಕನ್ನಡ ಭಾಷೆಗೆ 100 ಅಂಕಗಳ ಪ್ರಾಮುಖ್ಯತೆ ಇತ್ತು. ಆದರೆ ಈಗ ಕೇವಲ 35 ಅಂಕಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು.
ಬೇರೆ ಬೇರೆ ಭಾಷೆಗಳನ್ನು ಬಳಸುವುದರಿಂದ ಗ್ರಾಮೀಣ ಯುವಕರಿಗೆ ಅನ್ಯಾಯವಾಗಲಿದೆ ಎಂದು ಅವರು ಎಚ್ಚರಿಸಿದರು. ಆದ್ದರಿಂದ ಈ ಪದ್ಧತಿಯನ್ನು ಕೂಡಲೇ ಕೈಬಿಡಬೇಕು ಎಂದು ಸರ್ಕಾರಕ್ಕೆ ರಾಜ್ಯ ರೈತ ಸಂಘದಿಂದ ಆಗ್ರಹಿಸಲಾಯಿತು. ಕೆಪಿಎಸ್‌ಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುಗಳನ್ನು ಹಾಕಿ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕನ್ನಡ ಭಾಷೆಯನ್ನು ಪ್ರಾಧಾನ್ಯತೆ ನೀಡಿ ನೇಮಕಾತಿ ಪ್ರಕ್ರಿಯೆಯನ್ನು ನಡೆಸಬೇಕು ಎಂಬುದು ಪ್ರತಿಭಟನೆಯ ಮುಖ್ಯ ಬೇಡಿಕೆಯಾಗಿತ್ತು.




