ಧಾರವಾಡ | ಹಿಟ್ ಅಂಡ್ ರನ್ ಕಾಯ್ದೆಗೆ ವಿರೋಧಿಸಿ ಲಾರಿ ಚಾಲಕರ ಸಂಘ ಪ್ರತಿಭಟನೆ

Date:

ಕೇಂದ್ರ ಸರ್ಕಾರ ಹೊರಡಿಸಿದ ಕಾನೂನಿಂದ ಲಾರಿ ಚಾಲಕರು ಈಗಾಗಲೇ ಸ್ಟೇರಿಂಗ್ ಛೋಡೋ ಆಂದೋಲನವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದ ಕಾನೂನನ್ನು ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ಲಾರಿ ಚಾಲಕರ, ಮಾಲೀಕರ ಸಂಘ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದೆ.

ಹಿಟ್ ಅಂಡ್ ರನ್ ಕೇಸ್‌ಗೆ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 7ಲಕ್ಷ ರೂಪಾಯಿ ದಂಡ ವಿಧಿಸುವ ನೀತಿಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಇದು ಜನ ವಿರೋಧಿ ಕಾನೂನು. ಇದು ಲಾರಿ ಚಾಲಕರಿಗೆ ಅಷ್ಟೇ ಅಲ್ಲ ಪ್ರತಿಯೊಂದು ವಾಹನ ಸವಾರರಿಗೆ ಸಂಬಂಧ ಪಡುತ್ತದೆ. ಅವರ ಕಡಿಮೆ ಪಗಾರದಲ್ಲಿ ಇಂತಹ ಘಟನೆ ಆದ್ರೆ, ಅಷ್ಟು ಹಣ ಮತ್ತು 10ವರ್ಷ ಜೈಲು ಶಿಕ್ಷೆ ಕೊಟ್ಟರೆ, ಅವರ ಕುಟುಂಬ ಬೀದಿಗೆ ಬರುತ್ತದೆ.

ಕೇಂದ್ರ ಸರ್ಕಾರದ ಈ ಕಾನೂನು ವಾಹನ ಸವಾರರಿಗೆ ತುಂಬಾ ತೊಂದರೆ ಕೊಡುತ್ತಿದೆ. ಕೂಡಲೆ ಈ ನೀತಿಯನ್ನು ಹಿಂಪಡೆಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ದುರ್ಗದ ಬೈಲ್‌ನಿಂದ ಆಟೋ ಚಾಲಕರ ಸಂಘ, ಲಾರಿ ಚಾಲಕರ ಸಂಘ ಒಗ್ಗೂಡಿ ರ್ಯಾಲಿ ಮಾಡುವುದರ ಮೂಲಕ, ತಹಸೀಲ್ದಾರ ಕಚೇರಿಗೆ ತೆರಳಿ ತಹಸೀಲ್ದಾರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ಮೂರು ದಿನದಿಂದ ಲಾರಿ ಚಾಲಕರು ಸ್ವಯಂ ಪ್ರೇರಿತವಾಗಿ, ಯಾವುದೇ ಗೂಡ್ಸ್ ರವಾನಿಸದೆ, ʼಸ್ಟೇರಿಂಗ್ ಛೋಡೋ ಆಂದೋಲನʼ ಆರಂಭಿಸಿದ್ದಾರೆ. ಈ ಕಾನೂನು ಹಿಂಪಡೆಯುವರೆಗೂ ಈ ಹೋರಾಟ ಮುಂದುವರೆಸುತ್ತೇವೆಂದು ಎಚ್ಚರಿಕೆ ಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...

ದಾವಣಗೆರೆ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ...