ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

Date:

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ʼಕೇಂದ್ರ ಸರ್ಕಾರ ನಾಲಾ ಯೋಜನೆ ಮಾಡಲು ವಿಳಂಬ ಮಾಡುತ್ತಿದೆʼ ಎಂದು ಆರೋಪಿಸಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿದೆ.

- Advertisement -

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ, ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ, ತಲೆಯ ಮೇಲೆ ಖಾಲಿ ಕೊಡ ಇಟ್ಟುಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ರೈತ ಪರ ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

“ಮಹದಾಯಿ ಮತ್ತು ಕಳಸಾ–ಬಂಡೂರಿ ಯೋಜನೆ ಜಾರಿಗೆ ಅನಗತ್ಯ ವಿಳಂಬವಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹದಾಯಿ ವಿಷಯ ಕುರಿತು ಚರ್ಚಿಸಬೇಕು. ಕೂಡಲೇ ಯೋಜನೆ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಮಹದಾಯಿ ಹೋರಾಟಗಾರರು ಆಗ್ರಹಿಸಿದರು.

ಕುಂದಗೋಳ ತಾಲೂಕು ರೈತ ಸಂಘದ ಮುಖಂಡ ಶಂಕರಗೌಡ ದೊಡವಾಡ ಈ ದಿ‌ನ.ಕಾಮ್‌ನೊಂದಿಗೆ ಮಾತನಾಡಿ, “ಮಹದಾಯಿ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ದ್ವಿಮುಖ ನೀತಿಯನ್ನು ಅನುಸರಿಸುತ್ತಿವೆ. ಈಗಾಗಲೆ ಕೇಂದ್ರ ಸರ್ಕಾರ ಎಲ್ಲವೂ ಸರಿಯಾಗಿ ನೆರವೇರಿದೆ ಎಂದು ಡಿಪಿಆರ್ ಹೊರಡಿಸಿ ಕಟೌಟ್‌ಗಳನ್ನು ಹಾಕಿಸಿದ್ದು, ಗ್ರೀನ್ ಲ್ಯಾಂಡ್ ಪರ್ಮಿಷನ್ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೇಳಿದೆ” ಎಂದರು.

“ಉತ್ತರ ಕರ್ನಾಟಕದ ಬಗ್ಗೆ ಎರಡೂ ಸರ್ಕಾರಗಳೂ ದ್ವಿಮುಖ ನೀತಿಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿದೆ. ಇತ್ತ ರಾಜ್ಯ ಸರ್ಕಾರವಾದರೂ ಕೇಂದ್ರದ ಮೇಲೆ ಸರಿಯಾದ ಕ್ರಮದಲ್ಲಿ ಒತ್ತಡ ಹೇರುತ್ತಿಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಬೈಸಿಕಲ್‌ನಲ್ಲಿ ಕಚೇರಿಗೆ ತೆರಳಿ ಗಮನ ಸೆಳೆದ ಡಿಸಿ, ಎಸ್‌ಪಿ

“ಮಹದಾಯಿ ಮತ್ತು ಕಳಸಾ ಬಂಡೂರಿ ಹೋರಾಟವನ್ನು ರಾಜಕಾರಣಿಗಳು ತಮ್ಮ ಅಧಿಕಾರದ ಅಸ್ತ್ರವನ್ನಾಗಿ ಮಾತ್ರ ಬಳಸಿಕೊಳ್ಳುತ್ತಿದ್ದಾರೆ. ಅವರವರ ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಯಾವೊಬ್ಬ ರಾಜಕಾರಣಿಯೂ ಈ ಯೋಜ‌ನೆ ಜಾರಿಯಾಗಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿಲ್ಲ. ಮಹದಾಯಿ ಕುರಿತು ಸದನದಲ್ಲಿ ಚರ್ಚೆಯಾಗದೆ ಇದ್ದಲ್ಲಿ ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ನಡೆಯನ್ನು ಹೊಂದಿದ್ದೇವೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...