ಅಂಗವಿಕಲರ ಕುಂದುಕೊರತೆಗಳ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಉದ್ದೇಶದಿಂದ ಸಪ್ಟೆಂಬರ್ 10, 2026 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಹೊಸ ಸಭಾಭವನದಲ್ಲಿ ಅಂಗವಿಕಲರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ.
- Advertisement -
ಸಭೆಯಲ್ಲಿ ಧಾರವಾಡ ಜಿಲ್ಲೆಯ ವಿಕಲಚೇತನರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





