ಧಾರವಾಡ | ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಎಸ್.ಎಫ್. ಸಿದ್ದನಗೌಡರ

Date:

“ಇಂದಿನ ಒತ್ತಡದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉತ್ತಮ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಹಾಗೂ ಯೋಗಾಭ್ಯಾಸವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅವರು ಹೇಳಿದರು.

- Advertisement -

ಧಾರವಾಡ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುರ್ವೇದ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ಅಭಿಯಾನದಡಿ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ಆಯುರ್ವೇದವು ಭಾರತ ಜಗತ್ತಿಗೆ ನೀಡಿದ ಅತ್ಯಂತ ಮಹತ್ವದ ಕೊಡುಗೆಯಾಗಿದೆ. ಆಯುರ್ವೇದ ಹಾಗೂ ಯೋಗವು ಪುರಾತನ ಕಾಲದಿಂದಲೂ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಆದರೆ ಒಂದು ಹಂತದಲ್ಲಿ ಭಾರತದಲ್ಲಿಯೇ ಆಯುರ್ವೇದ ಪದ್ಧತಿಗೆ ಸೂಕ್ತವಾದ ಪ್ರಾಮುಖ್ಯತೆ ದೊರೆಯದೆ ಹಿಂದುಳಿಯುವಂತಾಗಿತ್ತು. ಇತ್ತೀಚಿನ ದಿನಗಳಲ್ಲಿ ಆಯುರ್ವೇದ ಹಾಗೂ ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯುತ್ತಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಆಯುರ್ವೇದ ಇಲಾಖೆಯ ವತಿಯಿಂದ ಆಯುರ್ವೇದ ಮತ್ತು  ಚಿಕಿತ್ಸಾ ಪದ್ಧತಿಗಳ ಕುರಿತು ಹೆಚ್ಚಿನ ಗಮನ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ ದೇಶ ಮಾತ್ರವಲ್ಲದೆ ಜಗತ್ತಿನ ವಿವಿಧ ಭಾಗಗಳಲ್ಲಿಯೂ ಆಯುರ್ವೇದ ಹಾಗೂ ಯೋಗದ ಬಗ್ಗೆ ಆಸಕ್ತಿ ಹೆಚ್ಚುತ್ತಿದೆ” ಎಂದು ತಿಳಿಸಿದರು.

“ಆಹಾರ ಕ್ರಮ, ವ್ಯಾಯಾಮ, ಯೋಗಕ್ಕೆ ಆದ್ಯತೆ ನೀಡಿ ದೈನಂದಿನ ಜೀವನಶೈಲಿಯಲ್ಲಿ ಬದಲಾವಣೆ, ಆಹಾರ ಪದ್ಧತಿಯಲ್ಲಿನ ವ್ಯತ್ಯಾಸ ಹಾಗೂ ಕೆಲಸದ ಒತ್ತಡದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಯಂತ್ರಿಸಲು ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು ಹಾಗೂ ಯೋಗಾಭ್ಯಾಸ ಮಾಡುವುದು ಅಗತ್ಯವಾಗಿದೆ. ನೌಕರರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಕರ್ತವ್ಯ ನಿರ್ವಹಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಉತ್ತಮ ಆರೋಗ್ಯದೊಂದಿಗೆ ಕರ್ತವ್ಯ ನಿರ್ವಹಿಸಿದಾಗ ವೈಯಕ್ತಿಕ ಜೀವನದ ಜೊತೆಗೆ ಇಲಾಖೆಯ ಕೆಲಸಗಳನ್ನೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ  ಆಯುರ್ವೇದ ಹಿರಿಯ ವೈದ್ಯಾಧಿಕಾರಿ ಡಾ. ಸಂತೋಷ ತಾಡಪತ್ರಿ, ಡಾ. ಎಸ್. ಪಿ. ಕೊಟ್ಟೂರ, ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ರಚನಾ ಯಾದವರಾವ್ ಅವರು ಅಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಆಯುರ್ವೇದ ಸಿದ್ಧಾಂತದ ಮಹತ್ವದ ಬಗ್ಗೆ ಉಪನ್ಯಾಸ ಮತ್ತು ಪ್ರದರ್ಶನ ಕಾರ್ಯಕ್ರಮ ನೀಡಿದರು. 

ಕಾರ್ಯಕ್ರಮ  ಆಯುರ್ವೇದ ವೈದ್ಯಾಧಿಕಾರಿ ಡಾ. ಆಶಾ ಎನ್ ಅವರು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಆಯುರ್ವೇದ ವೈದ್ಯಾಧಿಕಾರಿ ಡಾ. ಅಮೃತ ಪಾಸ್ತೆ ನಿರೂಪಿಸಿದರು. ವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಸಂಕದಾಳ ಅವರು ವಂದಿಸಿದರು. ವೇದಿಕೆಯಲ್ಲಿ ಜಿಲ್ಲಾ ಆಯುರ್ವೇದ ವೈದ್ಯಾಧಿಕಾರಿ ಡಾ. ಗಣೇಶ ಎಸ್.ಕಬಾಡೆ, ಸತ್ಯಸಾಯಿ ಹೋಮಿಯೋಪತಿ ಮಹಾವಿದ್ಯಾಲಯದ ಪ್ರಾಂಶುಪಾಲ ಸುಹನ್ ಮುನಗತ್ತಿ, ನವಲಗುಂದ ಆಯುರ್ವೇದ ವೈದ್ಯಾಧಿಕಾರಿ ಡಾ. ಬಿ.ಪಿ. ಪೂಜಾರಿ, ಡಾ.ಸವಿತಾ ಹುಣಸಿಮರದ, ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಹಳೇಪೇಟ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಆಯುರ್ವೇದ ಮಹಾವಿದ್ಯಾಲಯಗಳ ಸಿಬ್ಬಂದಿಗಳು, ಖಾಸಗಿ ಆಯುರ್ವೇದ ಸಂಸ್ಥೆಯವರು ಹಾಗೂ ಕರ್ನಾಟಕ ಸರ್ಕಾರಿ ಆಯುರ್ವೇದ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....

ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

"ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...